ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಮಹತ್ವದ ವಿಷಯವೊಂದನ್ನು ತಿಳಿಸಲಾಗುತ್ತಿದೆ. ಅರಹ ಫಲಾನುಭವಿಗಳಿಂದ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದೀಗ ಕೇವಲ ಎರಡು ದಿನಗಳು ಮಾತ್ರ ಕಾಲಾವಕಾಶವಿದೆ.
ಸಾಕಷ್ಟು ಅಭ್ಯರ್ಥಿಗಳು ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಕಾಯ್ದು ಕೂತಿದ್ದಾರೆ ಆಹಾರ ನಾಗರಿಕ ಸರಬರಾಜು ಇಲಾಖೆಯು ಅರ್ಹ ಫಲಾನುಭವಿಗಳಿಗೆ ಇದೀಗ ದಿಢೀರ್ ಸಿಹಿ ಸುದ್ದಿ ನೀಡಿದೆ.
ಸದ್ಯದೀಗ ರಾಜ್ಯ ಸರ್ಕಾರವು ಕೇವಲ ಎರಡು ದಿನಗಳ ಮಟ್ಟಿಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಕೊಟ್ಟಿದ್ದು ಸೂಕ್ತ ದಾಖಲಾತಿಗಳೊಂದಿಗೆ ಆನ್ಲೈನ್ ಮೂಲಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೊಸ ರೇಷನ್ ಕಾರ್ಡ್ ಗೆ ಬೇಕಾಗುವ ದಾಖಲೆಗಳು ಏನು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು ರೇಷನ್ ಕಾರ್ಡ್ ನಿಂದ ಏನೆಲ್ಲ ಪ್ರಯೋಜನಗಳು ಸಿಗಲಿವೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡಬಹುದಾಗಿದೆ.
Contents
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕೇವಲ ಎರಡು ದಿನಗಳು ಮಾತ್ರ ಅವಕಾಶ :
ಸರ್ಕಾರದ ಗ್ಯಾರೆಂಟಿ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ಹಾಗೂ ಇನ್ನು ಅನೇಕ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ರೇಷನ್ ಕಾರ್ಡ್ ಬಹು ಪ್ರಮುಖವಾದ ದಾಖಲೆಯಾಗಿದೆ ಎಂದು ಹೇಳಬಹುದು.
ಅದರಲ್ಲಿಯೂ ಮುಖ್ಯವಾಗಿ ಸರ್ಕಾರವು ಜಾರಿಗೆ ತಂದಿರುವ ಗ್ಯಾರೆಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ರೇಷನ್ ಕಾರ್ಡ್ ಅಗತ್ಯವಾಗಿ ಬೇಕು. ಆದರೆ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆ ವರ್ಷಗಳಿಂದ ಸಹಿತಗೊಂಡಿದ್ದು ಸರ್ಕಾರಕ್ಕೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಮೇಲಿಂದ ಮೇಲೆ ಅಗ್ರಹಗಳು ಜನರಿಂದ ಕೇಳಿ ಬರುತ್ತಲೇ ಇದ್ದವು.
ಅದರಂತೆ ಇದೀಗ ಸರ್ಕಾರವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕೇವಲ ಎರಡು ದಿನಗಳ ಮಾತ್ರ ಕಾಲಾವಕಾಶ ನೀಡಿದೆ ಎಂದು ಹೇಳಬಹುದು.
ಇದೇ ಏಪ್ರಿಲ್ ನಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗುವುದು ಎಂಬ ಮಾಹಿತಿಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಕ ಸಚಿವರಾದ ಕೆಎಚ್ ಮುನಿಯಪ್ಪ ರವರು ಮಾಹಿತಿ ನೀಡಿದ್ದಾರೆ. ಆದರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕೇವಲ ಎರಡು ದಿನ ತಾತ್ಕಾಲಿಕ ಅವಕಾಶ ಆಹಾರ ಇಲಾಖೆಯು ಕಲ್ಪಿಸಿದೆ ಎಂದು ಹೇಳಬಹುದು.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಸರ್ಕಾರವು ಇದೀಗ ಹೊಸ ಎಪಿಎಲ್ ಅಥವಾ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸುವುದರ ಜೊತೆಗೆ ಪಡಿತರ ಚೀಟಿಯಲ್ಲಿ ತಿದ್ದುಪಡಿಗಳಿಗೂ ಇದೀಗ ಅವಕಾಶ ಕಲ್ಪಿಸಲಾಗಿದ್ದು ಅರ್ಹ ಫಲಾನುಭವಿಗಳು ಮಾರ್ಚ್ 8ರ ಶುಕ್ರವಾರ ಮತ್ತು ಮಾರ್ಚ್ 9ರ ಶನಿವಾರದಂದು ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ರೇಷನ್ ಕಾರ್ಡ್ ತಿದ್ದುಪಡಿ ಕೂಡ ಈ ಎರಡು ದಿನಗಳಲ್ಲಿ ಮಾಡಿಕೊಳ್ಳಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ರೇಷನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸುವವರು ಕಾಯುತ್ತಿದ್ದರೆ ಅವರಿಗೆ ಈ ಕೂಡಲೇ ತಿಳಿಸಿ.
ಅದರಂತೆ ಹೊಸ ರೇಷನ್ ಕಾರ್ಡಿಗೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಆನ್ಲೈನ್ ಮುಖಾಂತರ ಅವಕಾಶ ಕಲ್ಪಿಸಲಾಗಿದ್ದು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. https://ahara.kar.nic.in ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಇದಾಗಿದ್ದು ಈ ವೆಬ್ಸೈಟ್ ಗೆ ಭೇಟಿ ನೀಡಿದೆ ಹೊಸ ಪಡಿತರ ಚೀಟಿ ಹಾಗೂ ಪಡಿತರ ಚೀಟಿಗೆ ತಿದ್ದುಪಡಿಗೆ ಸಂಬಂಧಿಸಿದಂತೆ ಬದಲಾವಣೆಗಳನ್ನು ಮಾಡಿಕೊಳ್ಳಬಹುದು.
ಇದನ್ನು ಓದಿ : ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಿದ್ದರಾಗಿ ಇಲ್ಲಿದೆ ಲಿಂಕ್ !
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :
ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ. ಆಗ ಮಾತ್ರ ಅಭ್ಯರ್ಥಿಗಳು ಸಲ್ಲಿಸುವ ಅರ್ಜಿಯು ವಿಕೃತವಾಗುತ್ತದೆ. ಹೊಸದಾಗಿ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ಗಳಿಗೆ ಅಭ್ಯರ್ಥಿಗಳು ಈ ಕೆಳಗಿನ ದಾಖಲೆಗಳನ್ನು ಹೊಂದುವುದರ ಮೂಲಕ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದು.
- ವಿಳಾಸದ ಪುರಾವೆಯಾಗಿ ವೋಟರ್ ಐಡಿ ಡ್ರೈವಿಂಗ್ ಲೈಸೆನ್ಸ್.
- ಆಧಾರ್ ಕಾರ್ಡ್
- ಕುಟುಂಬದ ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋ
- ಮೊಬೈಲ್ ನಂಬರ್
- ಇಮೇಲ್ ಐಡಿ
- ವಾರ್ಡ್ ಕೌನ್ಸಿಲರ್ ನೀಡಿದ ಸ್ವಯಂ ಘೋಷಣೆ ಪ್ರಮಾಣ ಪತ್ರ
ಹೀಗೆ ಈ ಪ್ರಮುಖ ದಾಖಲೆಗಳನ್ನು ಹೊಂದುವುದರ ಮೂಲಕ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಯಾವ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬೇಕು :
ಅಭ್ಯರ್ಥಿಗಳು ಈ ಎಲ್ಲ ದಾಖಲಾತಿಗಳೊಂದಿಗೆ secugen ಬಯೋಮೆಟ್ರಿಕ್ ಸೌಲಭ್ಯವಿರುವಂತಹ ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರ ಕರ್ನಾಟಕ ಬ್ಯಾಂಕ್ ಕೇಂದ್ರ ಬೆಂಗಳೂರು ಒನ್ ಸೈಬರ್ ಸೆಂಟರ್ ಅಥವಾ ಸಿ ಎಸ್ ಸಿ ಸೆಂಟರ್ ಗೆ ಭೇಟಿ ನೀಡಿ ಅಗತ್ಯ ದಾಖಲಾತಿಗಳೊಂದಿಗೆ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿಯನ್ನು ನಿಗದಿತ ಶುಲ್ಕದೊಂದಿಗೆ ಸಲ್ಲಿಸಬಹುದಾಗಿದೆ.
ಒಟ್ಟಾರೆ ರಾಜ್ಯ ಸರ್ಕಾರವು ಹೊಸದಾಗಿ ಅರ್ಜಿಯನ್ನು ಸಲ್ಲಿಸಲು ಕಾದು ಕುಳಿತಿರುವ ಅರ್ಹ ಫಲಾನುಭವಿಗಳಿಗೆ ಇದೀಗ ಕೇವಲ ಎರಡು ದಿನಗಳವರೆಗೆ ಅರ್ಜಿ ಸಲ್ಲಿಸಲು ರೇಷನ್ ಕಾರ್ಡ್ ಗೆ ಕಾಲಾವಕಾಶ ಕಲ್ಪಿಸಲಾಗಿದ್ದು
ಈ ಬಗ್ಗೆ ಎಲ್ಲರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಬಯಸುತ್ತಿದ್ದರೆ ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವಂತಹ ಮಾಹಿತಿಗಳನ್ನು ತಿದ್ದುಪಡಿ ಮಾಡಲು ಬಯಸುತ್ತಿದ್ದಾರೆ ಅವರಿಗೆ ಸರ್ಕಾರಿ ಎರಡು ದಿನಗಳ ವರೆಗೆ ಕಾಲಾವಕಾಶ ನೀಡಿದೆ ಎಂಬುದರ ಈ ಮಾಹಿತಿಯನ್ನು ತಿಳಿಸಿ ಇದರಿಂದ ಅವರು ತಕ್ಷಣವೇ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತಹ ಎಲ್ಲ ಕೆಲಸಗಳನ್ನು ಮಾಡಿಕೊಂಡು ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲಿ ಧನ್ಯವಾದಗಳು.
ಇತರೆ ವಿಷಯಗಳು :
- ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಿದ್ದರಾಗಿ ಇಲ್ಲಿದೆ ಲಿಂಕ್ !
- ಕೇಂದ್ರ ಸರ್ಕಾರಿ ಹುದ್ದೆಗಳು : ಕರ್ನಾಟಕದಲ್ಲಿ ಉದ್ಯೋಗ ಅವಕಾಶ ! 10ನೇ ತರಗತಿ ಪಾಸ್ ಆಗಿದ್ದರೆ ಸಾಕು
ಅರ್ಜಿ ಯಾವಾಗ ಸಲ್ಲಿಸಬೇಕು ..?
ಏಪ್ರಿಲ್ ನಿಂದ ಹೊಸ ಅರ್ಜಿ ಪ್ರಾರಂಭ.
ಅರ್ಜಿ ಎಲ್ಲಿ ಸಲ್ಲಿಸಬೇಕು ..?
ಕರ್ನಾಟಕ ಒನ್ . ಗ್ರಾಮ ಒನ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ.
ಒಂದು ಕುಟುಂಬಕ್ಕೆ ಎಷ್ಟು ರೇಷನ್ ಕಾರ್ಡ್ ಸಿಗುತ್ತೆ ..?
ಕೇವಲ ಒಂದೇ ರೇಷನ್ ಕಾರ್ಡ್ ಮಾತ್ರ ಲಭ್ಯ.