ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರದಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.
ವಿವಿಧ ಇಲಾಖೆಗಳಲ್ಲಿ ಕರ್ನಾಟಕ ಸರ್ಕಾರದಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಇದೀಗ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಅಕೌಂಟೆಂಟ್ ಮತ್ತು ಸಾಕ್ಷರರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಕರ್ನಾಟಕ ಸರ್ಕಾರದಿಂದ ಉದ್ಯೋಗವನ್ನು ಪಡೆಯಬಹುದಾಗಿದೆ ಹಾಗಾದರೆ ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ವೇತನ ಶ್ರೇಣಿ ಏನು ಹುದ್ದೆಗಳ ವಿವರವೇನುಹಾಗೂ ವಯೋಮಿತಿ ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಿಳಿದುಕೊಳ್ಳಬಹುದಾಗಿದೆ.
Contents
ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳು :
ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಬರ್ತಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರ ಜಿಲ್ಲೆಯ ವತಿಯಿಂದ ಹೊಸ ನೇಮಕಾತಿಗಾಗಿ ಪ್ರಕಟಣೆ ಹೊರ ಬಿದ್ದಿದೆ .
ಇದರಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಮತ್ತು ಹಣಕಾಸು ಸಾಕ್ಷರ ಪರಿಣಿತರು ಹಾಗೂ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮುಖಾಂತರ ನಿಗದಿತ ಅರ್ಜಿ ನಮೂನೆಯ ಮೂಲಕ ಆಸಕ್ತಿ ಹೊಂದಿರುವ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ವಿದ್ಯಾರ್ಹತೆ ಮತ್ತು ಮುಂತಾದ ಶರತ್ತುಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುವಂತೆ ಪೂರೈಸಬೇಕಾಗುತ್ತದೆ.
ಇದನ್ನು ಓದಿ : ರೇಷನ್ ಕಾರ್ಡ್ ಹೊಂದಿರುವವರಿಗೆ 5000 ಸಾವಿರ ಸಿಗುತ್ತೆ! ತಕ್ಷಣ ಅರ್ಜಿ ಸಲ್ಲಿಸಲು ಸಿದ್ದರಾಗಿ. !!
ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳು :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಯಾವ ಹುದ್ದೆಗಳು ಖಾಲಿ ಇವೆ ವಿದ್ಯಾರ್ಹತೆಯನ್ನು ವೇತನ ಶ್ರೇಣಿ ಏನು ಅರ್ಜಿ ಶುಲ್ಕ ಆಯ್ಕೆಯ ವಿಧಾನ ಅರ್ಜಿ ಸಲ್ಲಿಸುವ ವಿಧಾನ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡುವುದಾದರೆ,
- ಹುದ್ದೆಯ ಹೆಸರು : ಜಿಲ್ಲಾ ಕಾರ್ಯಕ್ರಮ ಸಹಾಯಕರು, ಹಣಕಾಸು ಸಾಕ್ಷರ ಮತ್ತು ಅಕೌಂಟೆಂಟ್, ಜೆಂಡರ್ ಸ್ಪೆಷಲಿಸ್ಟ್.
- ಹುದ್ದೆಗಳ ಸಂಖ್ಯೆ : ಒಂದು ಜಿಲ್ಲಾ ಕಾರ್ಯಕ್ರಮ ಸಹಾಯಕರು, ಒಂದು ಹಣಕಾಸು ಸಾಕ್ಷರ ಮತ್ತು ಅಕೌಂಟೆಂಟ್, ಒಂದು ಜೆಂಡರ್ ಸ್ಪೆಷಲಿಸ್ಟ್ ಒಟ್ಟು ಮೂರು ಹುದ್ದೆಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರದಲ್ಲಿ ಖಾಲಿ ಇವೆ.
ವೇತನ ಶ್ರೇಣಿ :
ಕರ್ನಾಟಕ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಆಯ್ಕೆಯಾದ ನಂತರ ಕೆಳಗೆ ನೀಡಲಾದ ಮಾಸಿಕ ಕ್ರೋಢಿಕೃತವೇದನವನ್ನು ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಚಾಮರಾಜನಗರ ಜಿಲ್ಲೆಯ ವತಿಯಿಂದ ನೀಡಲಾಗುತ್ತದೆ. ಅದರಂತೆ ಹುದ್ದೆಗಳಿಗೆ ಅನುಸಾರವಾಗಿ ವೇತನವನ್ನು ನಿಗದಿಪಡಿಸಲಾಗಿದೆ.
- 50,000 : ಜಿಲ್ಲಾ ಕಾರ್ಯಕ್ರಮ ಸಹಾಯಕರು
- 35,000 : ಹಣಕಾಸು ಸಾಕ್ಷರ ಮತ್ತು ಅಕೌಂಟೆಂಟ್
- 28000 : ಜೆಂಡರ್ ಸ್ಪೆಷಲಿಸ್ಟ್
ಒಟ್ಟಾರೆ ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಎಂದು ಹೇಳಬಹುದು.
ವಿದ್ಯಾರ್ಹತೆ :
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು ಅವುಗಳೆಂದರೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ದೊಳಗಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಮುಗಿಸಿರಬೇಕು.
ವಯಸ್ಸಿನ ಮಿತಿ :
ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು 45 ವರ್ಷ ಮೀರಿರಬಾರದು ಎಂದು ಅದಿ ಸೂಚನೆಯಲ್ಲಿ ತಿಳಿಸಲಾಗಿದೆ. ವರ್ಗಗಳಿಗೆ ಅನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
- ಐದು ವರ್ಷ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ.
- ಮೂರು ವರ್ಷ : ಇತರೆ ಹಿಂದುಳಿದ ವರ್ಗಗಳಿಗೆ.
- ಹತ್ತು ವರ್ಷ : ಅಂಗವಿಕಲ ಅಭ್ಯರ್ಥಿಗಳಿಗೆ.
ಆಯ್ಕೆಯ ವಿಧಾನ :
ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಅಥವಾ ಮೌಖಿಕ ಪರೀಕ್ಷೆಯನ್ನು ನಡೆಸಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನೇರ ನೇಮಕಾತಿ ಇಲ್ಲ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಆಸಕ್ತಿ ಹಾಗೂ ಅರ್ಹವಿದ್ಯಾರತೆಯನ್ನು ಹೊಂದಿರುವ ಅಭ್ಯರ್ಥಿಗಳು ಜಿಲ್ಲಾ ಚಾಮರಾಜನಗರ ಎನ್ಐಸಿ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಅಂದರೆ 26-03-2024 ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು :
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಪ್ರಮುಖ ದಿನಾಂಕಗಳನ್ನು ಅತಿ ಸೂಚನೆಯಲ್ಲಿ ಹೊರಡಿಸಲಾಗಿದೆ.
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :26-02-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :26-03-2024
ಅರ್ಜಿ ಸಲ್ಲಿಸುವ ಲಿಂಕ್ : https://wcd.karnataka.gov.in/
ಹೀಗೆ ಕರ್ನಾಟಕ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳು ಹಾಗೂ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹಾಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗುತ್ತಿದ್ದು ಆಸಕ್ತಿ ಹೊಂದಿರುವ ಹಾಗೂ ನಿರುದ್ಯೋಗ ಯುವಕ ಯುವತಿಯರು ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ.
ಹಾಗಾಗಿ ಕರ್ನಾಟಕದಲ್ಲಿರುವ ಪ್ರತಿಯೊಬ್ಬರಿಗೂ ಕರ್ನಾಟಕ ಸರ್ಕಾರವು ಹುದ್ದೆಗಳ ಬಗ್ಗೆ ತಿಳಿಸಿರುವ ಬಗ್ಗೆ ಶೇರ್ ಮಾಡಿ ಇದರಿಂದ ಅವರು ಉದ್ಯೋಗವನ್ನು ಕರ್ನಾಟಕ ಸರ್ಕಾರದಿಂದ ಪಡೆದು ಸರ್ಕಾರಿ ಉದ್ಯೋಗದಲ್ಲಿ ನಿರತರಾಗಲಿ ಧನ್ಯವಾದಗಳು.