ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಕೇಂದ್ರದಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಇದೀಗ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ.
ಆಸತ್ತಿರುವ ಅರ್ಹ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯ ಕ್ಷಯ ರೋಗ ನಿರ್ಮೂಲನ ಕೇಂದ್ರದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ.
ಹಾಗಾದರೆ ಎಷ್ಟು ಹುದ್ದೆಗಳು ಖಾಲಿ ಇವೆ. ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.
Contents
ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳು :
ಕ್ಷಯ ರೋಗ ನಿರ್ಮೂಲನೆ ಕೇಂದ್ರಗಳಿಗೆ ಕೊಪ್ಪಳ ಜಿಲ್ಲೆಯಲ್ಲಿ ಸಂಬಂಧಿಸಿದಂತೆ ಇದೀಗ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ.
ಅದರಂತೆ ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಲು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು, ಉತ್ತಮ. ಅದರಂತೆ ಈ ಹುದ್ದೆಗಳಿಗೆ ಸಂಬಂಧಿಸಿದ ವಯೋಮಾನ ಪ್ರಕ್ರಿಯೆ ಅರ್ಜಿ ಶುಲ್ಕದ ವಿವರ ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಸುವ ದಿನಾಂಕ ಆಯ್ಕೆಯ ಪ್ರಕ್ರಿಯೆ ವೇತನ ಶ್ರೇಣಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ನೋಡುವುದಾದರೆ,
ಇಲಾಖೆಯ ಹೆಸರು | ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕೇಂದ್ರ |
ಖಾಲಿ ಇರುವ ಹುದ್ದೆ | ಆರೋಗ್ಯ ಸಂದರ್ಶಕ ಪ್ರಯೋಗಾಲಯ ತಂತ್ರಜ್ಞಾನ |
ಉದ್ಯೋಗ ಸ್ಥಳ | ಕೊಪ್ಪಳ |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮುಖಾಂತರ |
PDF ಡೌನ್ಲೋಡ್ ಮಾಡಿ | https://drive.google.com/file/d/1ln4RP5miyFnCyRa8wSFBrY7q9YG-P0ZT/view |
ಆರೋಗ್ಯ ಸಂದರ್ಶಕ ಹಾಗೂ ಪ್ರಯೋಗಾಲಯ ತಂತ್ರಜ್ಞಾನ ಹುದ್ದೆಗಳು ಸೇರಿ ಒಟ್ಟು ಎರಡು ಹುದ್ದೆಗಳು ಕೊಪ್ಪಳ ಜಿಲ್ಲೆಯ ಕ್ಷಯ ರೋಗ ನಿರ್ಮೂಲನೆ ಅಧಿಕೃತ ಅಧಿಸೂಚನೆ ಪ್ರಕಾರ ಖಾಲಿ ಇವೆ ಎಂದು ತಿಳಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ :
ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯನ್ನು ಹುದ್ದೆಗಳ ಆಧಾರದ ಮೇಲೆ ಹೊಂದಿರಬೇಕಾಗುತ್ತದೆ.
- ಪ್ರಯೋಗಾಲಯ ತಂತ್ರಜ್ಞಾನ : ಪ್ರಯೋಗಾಲಯ ತಂತ್ರಜ್ಞಾನ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪಿಯುಸಿ ಮತ್ತು ಡಿಪ್ಲೋಮೋ ಇಲ್ಲವೇ ಪ್ರಮಾಣಿಕೃತ ಎಂಎಲ್‌ಟಿ ಕೋರ್ಸ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.
- ಕ್ಷಯ ರೋಗ ಆರೋಗ್ಯ ಸಂದರ್ಶಕ : ಕ್ಷಯ ರೋಗ ಆರೋಗ್ಯ ಸಂದರ್ಶಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಿಯುಸಿ ಅಥವಾ ಪದವಿ ಮತ್ತು ಎಂಪಿ ಡಬ್ಲ್ಯೂ ಅಥವಾ ಏ ಏನ್ ಡಬ್ಲ್ಯೂ ಅಥವಾ ಕೆಲಸ ಮಾಡಿದ ಅನುಭವ ಅಥವಾ ಟ್ಯೂಬರ್ಕ್ಯುಲೆಸಿಸ್ ಹೆಲ್ತ್ ವಿಸಿಟರ್ ಕೋರ್ಸ್ ಅನ್ನು ಮಾಡಿರಬೇಕಾಗುತ್ತದೆ.
ಇದನ್ನು ಓದಿ : ನಿಮ್ಮ ಆಧಾರ್ ಕಾರ್ಡ್ ಫೋಟೋವನ್ನು ಆನ್ಲೈನ್ ಮೂಲಕ ಅಪ್ಡೇಟ್ ಮಾಡಿ : ಇಲ್ಲಿದೆ ಸರಳ ವಿಧಾನ
ವಯಸ್ಸಿನ ಮಿತಿ :
ಕೊಪ್ಪಳ ಜಿಲ್ಲೆಯ ಕ್ಷಯ ರೋಗ ನಿರ್ಮೂಲನ ಕೇಂದ್ರದ ಅಧಿಸೂಚನೆ ಪ್ರಕಾರ ಕೊಪ್ಪಳ ಜಿಲ್ಲೆಯ ಕ್ಷಯ ರೋಗ ನಿರ್ಮೂಲನ ಕೇಂದ್ರದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ ವಯಸ್ಸು 45 ವರ್ಷ ವಯಸ್ಸಿರಬೇಕು. ಅಲ್ಲದೆ ವರ್ಗಗಳ ಆಧಾರದ ಮೇಲೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಶುಲ್ಕದ ವಿವರ :
ಕೊಪ್ಪಳದ ಕ್ಷಯ ರೋಗ ನಿರ್ಮೂಲನ ಕೇಂದ್ರದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ರೀತಿ ಅರ್ಜಿ ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಎಲ್ಲಾ ನಿಯಮಗಳನ್ನು ಅನುಸರಿಸುವ ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಕೆಲವು ನಿಯಮಗಳು :
- ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬೇಕು.
- ಅರ್ಜಿಯನ್ನು ಅಭ್ಯರ್ಥಿಯು ಕೊನೆಯ ದಿನಾಂಕ ದೊಳಗಾಗಿ ಸಲ್ಲಿಸಬೇಕು ಅದಾದ ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಅಧಿಕೃತ ವೆಬ್ ಸೈಟ್ ಇಲ್ಲವೇ ಕೆಳಗೆ ನೀಡಿರುವ ಅರ್ಜಿ ಸಲ್ಲಿಸುವ ಲಿಂಕ್ ಕ್ಲಿಕ್ ಮಾಡುವ ಮುಖಾಂತರ ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಬೇಕು.
- ಅಜ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲ ದಾಖಲಾತಿಗಳನ್ನು ಹೊಂದಿರಬೇಕು.
- ಲಗತ್ತಿಸಿದ ಎಲ್ಲ ದಾಖಲೆಗಳನ್ನು ಆನ್ಲೈನ್ ಮುಖಾಂತರ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ಅಭ್ಯರ್ಥಿಯ ಭಾವಚಿತ್ರ ಸಹಿ ಮತ್ತು ಹೆಬ್ಬರಳಿನ ಸ್ಕ್ಯಾನ್ ಮಾಡಿ ದಾಖಲಾತಿಗಳ ಜೊತೆಗೆ ಅಪ್ಲೋಡ್ ಮಾಡಬೇಕು.
- ಸಲ್ಲಿಸಿದ ಎಲ್ಲ ದಾಖಲಾತಿಗಳನ್ನು ಪುನಃ ಪರಿಶೀಲಿಸಿದ ನಂತರ ತಪ್ಪಿದ್ದರೆ ಅದನ್ನು ಸರಿಪಡಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 23 ಫೆಬ್ರವರಿ 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಮಾರ್ಚ್ 2024
ಆಯ್ಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಗಳನ್ನು ಅಧಿಕೃತ ಅಧಿಸೂಚನೆಯ ಪ್ರಕಾರ ನಡೆಸಲಾಗುತ್ತದೆ ಲಿಖಿತ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳಿಗೆ ನೇರ ಸಂದರ್ಶನದ ಮುಖಾಂತರ ಆಯ್ಕೆ ಮಾಡಿ ಉದ್ಯೋಗ ನೀಡಲಾಗುತ್ತದೆ.
ವೇತನ ಶ್ರೇಣಿ :
ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,000 ದಿಂದ 17850 ರೂಪಾಯಿಗಳ ವರೆಗೆ ವೇತನವನ್ನು ಅಧಿಸೂಚನೆಯ ಪ್ರಕಾರ ನೀಡಲಾಗುತ್ತದೆ.
ಒಟ್ಟಾರೆ ಕರ್ನಾಟಕ ಸರ್ಕಾರವು ಕರ್ನಾಟಕದಾದ್ಯಂತ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗುತ್ತಿದೆ ಅದರಂತೆ ಇದೀಗ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಕ್ಷಯ ರೋಗ ನಿರ್ಮೂಲನೆ ಕೇಂದ್ರದಲ್ಲಿ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲಾಗಿದ್ದು ಈ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರು ಅರ್ಜಿ ಸಲ್ಲಿಸಲು ತಿಳಿಸಿ ಧನ್ಯವಾದಗಳು.
ಕರ್ನಾಟಕ ಸರ್ಕಾರದ ಅಧಿಕೃತ ಜಾಲತಾಣ: https://sevasindhuservices.karnataka.gov.in/
ಕೊಪ್ಪಳ ಅಧಿಕೃತ ಜಾಲತಾಣ : https://koppal.nic.in/en/