ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರವು ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ನಡೆಸುತ್ತಿರುವ ಬಗ್ಗೆ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿದುಕೊಳ್ಳಬಹುದು. ಆನ್ಲೈನ್ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
Contents
1000 ಹುದ್ದೆಗಳಿಗೆ ನೇರ ನೇಮಕಾತಿ :
ರಾಜ್ಯ ಕಂದಾಯ ಇಲಾಖೆಯಲ್ಲಿ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳು ಅರ್ಹತೆಯನ್ನು ಪಡೆಯಬೇಕಾದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿ ಅದರಲ್ಲಿ ಉತ್ತೀರ್ಣರಾದವರಿಗೆ ಹುದ್ದೆಗಳನ್ನು ನೀಡಲಾಗುತ್ತದೆ. 324 ಮಾರ್ಚ್ ನಿಂದ 3 ಎಪ್ರಿಲ್ 2024ರ ವರೆಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಆದ https://kea.kar.nic.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯಾವುದಾದರೂ ಒಂದು ಜಿಲ್ಲೆಗೆ ಮಾತ್ರ ಅಭ್ಯರ್ಥಿಯು ಹುದ್ದೆ ಬಯಸಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು .
ಒಂದು ಬಾರಿ ಅರ್ಜಿ ಸಲ್ಲಿಸಿದರೆ ಯಾವುದೇ ಹಂತದಲ್ಲಿ ಅಥವಾ ಬದಲಾವಣೆ ಮಾಡಬೇಕೆಂದು ಬಯಸಿದರೆ ತಿದ್ದುಪಡಿ ಮಾಡಲು ಅವಕಾಶ ನೀಡಿರುವುದಿಲ್ಲ ಹಾಗಾಗಿ ಬಹಳ ಎಚ್ಚರಿಕೆಯಿಂದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ :
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಇದನ್ನು ಓದಿ : ಉಚಿತ ವಸತಿ ಯೋಜನೆಯಲ್ಲಿ 36,000 ಬಡ ಜನರಿಗೆ ಮನೆ ಹಂಚಿಕೆ !
ವಯಸ್ಸಿನ ಮಿತಿ :
ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀಸಲಾತಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.
ಹೀಗೆ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಖಾಲಿ ಇರುವ ಆಡಳಿತಾಧಿಕಾರಿ ಹುದ್ದೆಗಳಿಗೆ ಇದೀಗ ಅರ್ಜಿಯನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಹುದ್ದೆಗಳನ್ನು ಪಡೆಯಬಹುದಾಗಿದೆ ಹಾಗಾಗಿ ಕರ್ನಾಟಕದಲ್ಲಿರುವ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.