rtgh

ರೈತರೇ ಇತ್ತಕಡೆ ಗಮನಕೊಡಿ.!! ಈ ದಾಖಲೆ ಇದ್ದವರ ಖಾತೆಗೆ ʼಬರ ಪರಿಹಾರʼ

Drought relief

ಹಲೋ ಸ್ನೇಹಿತರೇ, 2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ಎಸ್‍ಡಿಆರ್‍ಎಫ್ ಅಥವಾ ಎನ್‍ಡಿಆರ್‍ಎಫ್ ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಈಗಾಗಲೇ ಅರ್ಹ ರೈತರಿಗೆ ಗರಿಷ್ಟ 2 ಸಾವಿರ ರೂ.ಗಳವರೆಗೆ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು, ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ, ಸರ್ಕಾರವು ಆದೇಶಿಸಿದೆ.

Drought relief

ಬೆಳೆ ಸಮೀಕ್ಷೆಯ ದತ್ತಾಂಶದ ಮಾಹಿತಿಯ ಆಧಾರ ಮೇಲೆ ಪ್ರೂಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರವನ್ನು ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರವನ್ನು ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುತ್ತದೆ.

ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.

ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು ಪ್ರೂಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೂಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಪ್ರೂಟ್ಸ್ ಐಡಿ ಸೃಜಿಸಿಕೊಳ್ಳಬಹುದು. ಪ್ರೂಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲ.

ಬ್ಯಾಂಕ್‌ ಗ್ರಾಹಕರೇ ಇತ್ತ ಕಡೆ ಗಮನಕೊಡಿ.!! ಈ ಕೆಲಸ ಮಾಡಿಲ್ಲ ಅಂದ್ರೆ ನಿಮ್ಮ ಹಣ ಕಟ್

ನಿವೃತ್ತಿಯ ನಂತರ ಸಾಯುವವರೆಗೂ ಈ ಯೋಜನೆಯಲ್ಲಿ ಹಣ ಪಡೆಯಬಹುದು : ಹಾಗಾದರೆ ಆ ಯೋಜನೆ ಯಾವುದು ?

Spread the love

Leave a Reply

Your email address will not be published. Required fields are marked *