rtgh

ರಾಜ್ಯದ ಮುಖ್ಯಮಂತ್ರಿಯಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸಿಹಿ ಸುದ್ದಿ

Good news for students and teachers

ನಮಸ್ಕಾರ ಸ್ನೇಹಿತರೆ 2024 25 ನೇ ಸಾಲಿನ ವಿಧಾನ ಸಭೆಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಚಿತ ವಿದ್ಯುತ್ ಮತ್ತು ನಿರಂತರ ನೀರಿನ ಸೌಲಭ್ಯಕ್ಕೆ ರಾಜ್ಯದ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಿಗೆ 25 ಕೋಟಿ ರೂಪಾಯಿಗಳ ಹಣವನ್ನು ಮೀಸಲಿಟ್ಟಿದ್ದಾರೆ. ಅದರಂತೆ ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ಏನಿಲ್ಲ ಮಾಹಿತಿಗಳು ಇದೆ ಎಂಬುದನ್ನು ನೋಡುವುದಾದರೆ.

Good news for students and teachers
Good news for students and teachers

Contents

ಶಾಲಾ ಕಾಲೇಜುಗಳ ಅಭಿವೃದ್ಧಿಗೆ 25 ಕೋಟಿ ಹಣ ಮೀಸಲು :

2024 25ನೇ ವಿಧಾನಸಭೆ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 25 ಕೋಟಿ ರೂಪಾಯಿಗಳನ್ನು ರಾಜ್ಯದ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನಿರಂತರ ನೀರಿನ ಸೌಲಭ್ಯಕ್ಕೆ ಮೀಸಲಿಟ್ಟಿದ್ದಾರೆ. ಅದರ ಜೊತೆಗೆ 20000 ವಿದ್ಯಾರ್ಥಿಗಳಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುವವರಿಗೆ ನೀಟ್ ಜೆಸಿ ತರಬೇತಿಗೆ 10 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. 850 ಕೋಟಿ ರೂಪಾಯಿಗಳನ್ನು ಶಾಲಾ-ಕಾಲೇಜು ಕೊಠಡಿ ದುರಸ್ತಿ ಶೌಚಾಲಯ ನಿರ್ಮಾಣಕ್ಕೆ ಮೀಸಲಿಡಲಾಗಿದೆ.

ಶಿಕ್ಷಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಜೆಟ್ :

ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತದೆ ಎಂದು ಬಜೆಟ್ ನಲ್ಲಿ ಮಂಡಿಸಲಾಗಿದೆ. ಕೊಪ್ಪಳ ಬೀದರ್ ಯಾದಗಿರಿ ರಾಯಚೂರು ಮತ್ತು ಕಲಬುರ್ಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜುಗಳನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಅವಶ್ಯವಿರುವ ಜಿಲ್ಲಾ ಅಥವಾ ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತದೆ.

500 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ನೂರು ಕೋಟಿ ರೂಪಾಯಿಗಳನ್ನು ಇದಕ್ಕಾಗಿ ಸರ್ಕಾರದಿಂದ ಅನುದಾನ ಮೀಸಲಿಟ್ಟಿದೆ. ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಸಂಪನ್ಮೂಲಗಳನ್ನು ಸಿ ಎಸ್ ಆರ್ ನಿಧಿ ಮತ್ತು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ನೀಡುವ ದೇಣಿ ಗೆ ಮೂಲಕ ಸಂಗ್ರಹಿಸಲಾಗುತ್ತದೆ.

ಒಟ್ಟಾರೆ ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ಶಾಲಾ ಕಾಲೇಜುಗಳ ಅಭಿವೃದ್ಧಿಗಾಗಿ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ ಅದರ ಜೊತೆಗೆ ಖಾಲಿ ಇರುವ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ.

ಸಿ ಎಸ್ ಆರ್ ಅನುದಾನದ ಅಡಿಯಲ್ಲಿ ಒಂದೇ ಸೂರಿನಡಿ ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತದೆ. ಹೀಗೆ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಭಿವೃದ್ಧಿಯನ್ನು ಸಾಧಿಸಲು ಈ ಕ್ರಮಗಳನ್ನು ಕೈಗೊಂಡಿರುವುದರಿಂದ ಈ ಬಗ್ಗೆ ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಯಾವ ಹುದ್ದೆಗಳು ಶೀಘ್ರ ಭರ್ತಿ ಮಾಡಲಾಗುತ್ತೆ .?

ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ.

ಇತೀಚಿಗೆ ಯಾವ ರಾಜ್ಯ ಬಜೆಟ್ ನಡೆದಿದೆ ..?

ಕರ್ನಾಟಕ.

Spread the love

Leave a Reply

Your email address will not be published. Required fields are marked *