ರೇಷನ್ ಕಾರ್ಡ್ (Ration card) ಗೆ ಸಂಬಂಧಪಟ್ಟಂತೆ ಸರ್ಕಾರ ಮೇಲಿಂದ ಮೇಲೆ ಹೊಸ ಅಪ್ಡೇಟ್ ಗಳನ್ನು ನೀಡುತ್ತದೆ. ಈಗಾಗಲೇ ಈಗ ರೇಷನ್ ಕಾರ್ಡ್ ಹೊಂದಿರುವವರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಬಹುದು. ಹಾಗೂ ಹೊಸದಾಗಿ ರೇಷನ್ ಕಾರ್ಡ್ ಪಡೆದುಕೊಳ್ಳುವವರಿಗೆ ಕೂಡ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಹೊಸ ರೇಷನ್ ಕಾರ್ಡ್ ಲಿಸ್ಟ್ ಬಿಡುಗಡೆ ಮಾಡಿದೆ.
ಆಹಾರ ಇಲಾಖೆಯ ಸಚಿವ ಕೆ ಎಚ್ ಮುನಿಯಪ್ಪ ಅವರು ತಿಳಿಸಿರುವಂತೆ ಏಪ್ರಿಲ್ ತಿಂಗಳಿನಿಂದ ಇದುವರೆಗೆ ವಿಲೇವಾರಿ ಆಗದೆ ಇರುವ ರೇಷನ್ ಕಾರ್ಡ್ ವಿತರಣೆ ಮಾಡಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿತ್ತು. ಆದರೆ ಎಲ್ಲಾ ಜಿಲ್ಲೆಗಳಲ್ಲಿಯೂ ಈಗಲೂ ಸರ್ಕಾರದ ಸರ್ವರ್ ಸಮಸ್ಯೆಯಿಂದ ಅಧಿಕೃತ ವೆಬ್ಸೈಟ್ ತೆರೆದುಕೊಳ್ಳುತ್ತಿಲ್ಲ.
ಪ್ರತಿಯೊಬ್ಬರು ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವುದು ಅಥವಾ ತಿದ್ದುಪಡಿ (Correction) ಮಾಡಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ.
ಇನ್ನು ಪಡಿತರ ಚೀಟಿ ಲಿಸ್ಟ್ ನಲ್ಲಿ ಯಾರ ಹೆಸರು ಇದೆ ಇಲ್ಲ ಎನ್ನುವುದನ್ನು ತಿಳಿದುಕೊಳ್ಳಲು ಏಪ್ರಿಲ್ ತಿಂಗಳಿನ ಹೊಸ ಲಿಸ್ಟ್ ಬಿಡುಗಡೆ ಮಾಡಲಾಗಿದೆ. ಒಂದು ವೇಳೆ ನಿಮಗೆ ಏಪ್ರಿಲ್ ತಿಂಗಳಲ್ಲಿ ಉಚಿತ ರೇಷನ್ ಸಿಕ್ಕಿಲ್ಲ ಎಂದಾದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ (Ration card cancelled) ಎಂದು ಅರ್ಥ.
ಇದರ ಬಗ್ಗೆ ನಿಮಗೆ ಸರಿಯಾದ ಮಾಹಿತಿ ಸಿಗಬೇಕು ಅಂದ್ರೆ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಹೋಗಿ ಮಾಹಿತಿ ಪಡೆಯಬಹುದು. ನಿಮ್ಮ ಹೆಸರಿನಲ್ಲಿ ರೇಷನ್ ಕಾರ್ಡ್ ಇಲ್ಲದೆ ಇದ್ರೆ ಉಚಿತ ರೇಷನ್ ಪಡೆದುಕೊಳ್ಳಲು ಸಾಧ್ಯವಿಲ್ಲ ಅದರ ಜೊತೆಗೆ ಸರ್ಕಾರದ ಇತರ ಯೋಜನೆಗಳ ಪ್ರಯೋಜನವು ಸಿಗುವುದಿಲ್ಲ.
ಸಾಕಷ್ಟು ರೇಷನ್ ಕಾರ್ಡ್ ಗಳನ್ನು ಸರ್ಕಾರ ರದ್ದುಪಡಿಸಿದೆ ಅದರಲ್ಲೂ ಬಿಪಿಎಲ್ ರೇಷನ್ ಕಾರ್ಡ್ ಕೂಡ ಅನರ್ಹರು ಪಡೆದುಕೊಂಡಿದ್ದು ಸರ್ಕಾರದ ಗಮನಕ್ಕೆ ಬಂದಿದೆ ಹಾಗಾಗಿ ಅಂತಹ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.
ಏಪ್ರಿಲ್ ತಿಂಗಳ ಲಿಸ್ಟಿನಲ್ಲಿ ನಿಮ್ಮ ಹೆಸರು ಇದೆಯಾ ನೋಡಿ !
ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಅಲ್ಲಿ ನೀವು ರದ್ದುಪಡಿಸಲಾದ ಮತ್ತು ತಡೆಹಿಡಿಯಲಾದ ರೇಷನ್ ಕಾರ್ಡ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಬಹುದು. ನೀವು ನಿಮ್ಮ ಜಿಲ್ಲೆ, ಗ್ರಾಮ ಮೊದಲಾದವುಗಳನ್ನು ಆಯ್ಕೆ ಮಾಡಿ ನಂತರ ನಿಮ್ಮ ಹಳ್ಳಿಯಲ್ಲಿ ಇರುವ ಎಲ್ಲ ರೇಷನ್ ಕಾರ್ಡ್ ಹೋಲ್ಡರ್ ಹೆಸರುಗಳನ್ನು ನೋಡಬಹುದು.
ರದ್ದುಪಡಿಸಲಾಗಿರುವ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದ್ರೆ ಇನ್ನು ಮುಂದೆ ಉಚಿತವಾಗಿ ನೀವು ರೇಷನ್ ಪಡೆದುಕೊಳ್ಳಲು ಸಾಧ್ಯವಿಲ್ಲ.
ಒಟ್ಟಿನಲ್ಲಿ ರಾಜ್ಯದಲ್ಲಿ ರೇಷನ್ ಕಾರ್ಡ್ ಎನ್ನುವುದು ಬಹಳ ದೊಡ್ಡ ಕಂಗ್ಗಟಾಗಿದೆ. ಆ ಕಡೆ ಫಲಾನುಭವಿಗಳಿಗೆ ರೇಷನ್ ಕಾರ್ಡ್ ವಿತರಣೆ ಮಾಡಬೇಕು. ಇನ್ನೊಂದು ಕಡೆಗೆ ಅನರ್ಹರ ರೇಷನ್ ಕಾರ್ಡ್ ರದ್ದುಪಡಿ ಮಾಡಬೇಕು.