ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಅಂದರೆ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್ ನಿಂದ ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನ ಮಾಡಲಾಗುತ್ತಿದ್ದು ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿ ವೇತನವನ್ನು ಹೇಗೆ ಪಡೆದುಕೊಳ್ಳಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುತ್ತದೆ.
ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್ ನಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಅಹ್ವಾನದ ಹೊಸ ಆದೇಶವನ್ನು ಮಾಡಲಾಗಿದ್ದು ಈ ಲೇಖನದಲ್ಲಿ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಗೆ ಬೇಕಾಗುವಂತಹ ಅರ್ಹತೆಗಳು ಏನನ್ನು ಹೊಂದಿರಬೇಕು ದಾಖಲೆಗಳು ಯಾವುವು? ಅರ್ಜಿ ಸಲ್ಲಿಸುವ ವಿಧಾನ ಯಾವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಯಬಹುದು.
Contents
ರಾಷ್ಟ್ರೀಯ ವಿದ್ಯಾರ್ಥಿವೇತನ :
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸ್ಕಾಲರ್ಶಿ ಪೋರ್ಟಲ್ ನ ಮೂಲಕ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಹೊಸ ಆದೇಶವನ್ನು ಅರ್ಜಿ ಆಹ್ವಾನದ ಬಗ್ಗೆ ಮಾಡಿದ್ದು ಅರ್ಜಿಯನ್ನು ವಿದ್ಯಾರ್ಥಿಗಳು ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮುಖಾಂತರ ಸಲ್ಲಿಸಬೇಕಾಗಿರುತ್ತದೆ. ಅದರಂತೆ ರಾಷ್ಟ್ರೀಯ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬುದನ್ನು ಈ ಕೆಳಗಿನಂತೆ ನೋಡಬಹುದು.
ಇದನ್ನು ಓದಿ : ಬಡವರಿಗೆ ಗುಡ್ ನ್ಯೂಸ್ : ಬಡವರ ಕೇಸ್ ಏನಾದರೂ ಹಲವರು ವರ್ಷಗಳಿಂದ ಕೋರ್ಟ್ ನಲ್ಲಿ ಇದ್ದರೆ ಅಂತವರಿಗೆ ಸಿಹಿ ಸುದ್ದಿ
ವಿದ್ಯಾರ್ಥಿ ವೇತನಕ್ಕೆ ಇರುವ ಅರ್ಹತೆಗಳು :
ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಆ ಅರ್ಹತೆಗಳು ಯಾವುವು ಎಂದು ನೋಡುವುದಾದರೆ,
- ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಭಾರತದ ಪ್ರಜೆಯಾಗಿರಬೇಕು.
- ಹಿಂದಿನ ತರಗತಿಯಲ್ಲಿ ಶೇಕಡ 50 ಅಂಕಗಳಿಂದ ವಿದ್ಯಾರ್ಥಿಯು ಉತ್ತೀರ್ಣರಾಗಿರಬೇಕು.
- ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷ ರೂಪಾಯಿಗಳಿಗಿಂತ ಕಡಿಮೆ ಇರಬೇಕು.
ಹೀಗೆ ಈ ಮೇಲಿನ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಂದರೆ ವಿದ್ಯಾರ್ಥಿಗಳು ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್ ಮೂಲಕ ಆನ್ಲೈನಲ್ಲಿ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದಾಗಿದ್ದು ಇದರಿಂದ ವಿದ್ಯಾರ್ಥಿ ವೇತನವನ್ನು ಕೂಡ ಪಡೆದುಕೊಳ್ಳಬಹುದಾಗಿದೆ.
ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್ ವಿದ್ಯಾರ್ಥಿ ವೇತನಕ್ಕೆ ಅಗತ್ಯ ದಾಖಲೆಗಳು :
ಕೇಂದ್ರ ಸರ್ಕಾರ ನೀಡುತ್ತಿರುವ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ. ಅದರಂತೆ ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್ ಗೆ ಅರ್ಜಿಯನ್ನು ಆನ್ಲೈನ್ ಮುಖಾಂತರವೇ ವಿದ್ಯಾರ್ಥಿಗಳು ಸಲ್ಲಿಸಬೇಕು ಈ ಕೆಳಗಿನ ನೀಡಿರುವ ದಾಖಲೆಗಳನ್ನು ಹೊಂದುವುದರ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ವಿಳಾಸ ಪುರಾವೆ
- ಮೊಬೈಲ್ ನಂಬರ್
- ಅಂಕಪಟ್ಟಿ
- ಪಾಸ್ಪೋರ್ಟ್ ಸೈಜ್ ಫೋಟೋ
- ನಾನು ಪ್ರಮಾಣ ಪತ್ರ
ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್ ಗೆ ಭೇಟಿ ನೀಡಿ ಸುಲಭವಾಗಿ ಆನ್ಲೈನ್ ಮೂಲಕ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ :
ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್ ಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದರೆ ಕೆಲವೊಂದು ವಿಧಾನಗಳನ್ನು ಅನುಸರಿಸಬೇಕಾಗುತ್ತದೆ ಅವುಗಳೆಂದರೆ,
- ಮೊದಲು ವಿದ್ಯಾರ್ಥಿಗಳು ಎನ್ ಎಸ್ ಪಿ ಪೋರ್ಟಲ್ ಗೆ ಅಂದರೆ ಎನ್ ಎಸ್ ಪಿ ಯ ಅಧಿಕೃತ ಎಕ್ಸಸೈಟ್ ಗೆ ಭೇಟಿ ನೀಡಬೇಕು.
- ಪೋರ್ಟಲ್ ಗೆ ಭೇಟಿ ನೀಡಿದ ನಂತರ ನೋಂದಣಿ ಆಯ್ಕೆ ಕಾಣುವುದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ
- ಅದಾದ ನಂತರ ಅದರಲ್ಲಿ ನಿಮಗೆ ಪರದೆಯ ಮೇಲೆ ನೊಂದಣಿ ಫಾರ್ಮ್ ತೆರೆಯುತ್ತದೆ.
- ಅದಾದ ನಂತರ ನೋಂದಣಿ ಫಾರ್ಮ್ ನಲ್ಲಿ ತಮ್ಮ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ ಸಬ್ಮಿಟ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.
- ಅದಾದ ನಂತರ ಲಾಗಿನ್ ಐಡಿ ಮತ್ತು ಪಾಸ್ವರ್ಡ್ ಅನ್ನು ಪಡೆಯಬೇಕಾಗುತ್ತದೆ.
- ಅರ್ಜಿದಾರರ ಮುಖಪುಟಕ್ಕೆ ಬಂದ ನಂತರ ಅದರಲ್ಲಿ ಫ್ರೆಶ್ ಅಪ್ಲಿಕೇಷನ್ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.
- ಅದಾದ ನಂತರ ನಿಮಗೆ ಅರ್ಜಿ ನಮೂನೆ ತೆರೆಯುತ್ತದೆ ಅದನ್ನು ನೀವು ಸರಿಯಾಗಿ ಭರ್ತಿ ಮಾಡಬೇಕಾಗುತ್ತದೆ.
- ಭರ್ತಿ ಮಾಡಿದ ನಂತರ ಅಲ್ಲಿ ಕೇಳಲಾಗುವಂತಹ ಪ್ರಮುಖ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ಅದಾದ ನಂತರ ರಶೀದಿಯನ್ನು ಪಡೆಯಲು ಸಬ್ಮಿಟ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.
ಹೀಗೆ ಎಂ ಎಸ್ ಟಿ ಪೋರ್ಟಲ್ ಗೆ ಭೇಟಿ ನೀಡುವುದರ ಮೂಲಕ ಹಂತ ಹಂತವಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು :
ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪ್ರಮುಖ ದಿನಾಂಕಗಳನ್ನು ತಿಳಿದಿರುವುದು ಮುಖ್ಯವಾಗಿರುತ್ತದೆ.
- ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ :01-05-2024
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :31-05-2024
ಹೀಗೆ ನಿಗದಿತ ದಿನಾಂಕದೊಳಗೆ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟಾರೆ ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟವನ್ನು ತ್ಯಜಿಸುವ ಸಲುವಾಗಿ ಹಾಗೂ ವಿದ್ಯಾರ್ಥಿಗಳು ಉನ್ನತ ಹಂತದ ಶಿಕ್ಷಣವನ್ನು ಪ್ರಾರಂಭಿಸುವ ಉದ್ದೇಶದಿಂದ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ಬಗ್ಗೆ ಎಲ್ಲಾ ವಿದ್ಯಾರ್ಥಿಗಳಿಗೆ ಶೇರ್ ಮಾಡುವ ಮೂಲಕ ಅವರೇನಾದರೂ ಶೇಕಡ 50ಕ್ಕಿಂತ ಹೆಚ್ಚಿನ ಅಂಕಗಳನ್ನು ಹಾಗೂ ಶೇಕಡ 50ರಷ್ಟು ಅಂಕಗಳನ್ನು ಪಡೆದಿದ್ದರೆ ಈ ಕೂಡಲೇ ಅವರಿಗೆ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ತಿಳಿಸಿ ಧನ್ಯವಾದಗಳು.