rtgh

ಹೊಸ ರೇಷನ್ ಕಾರ್ಡ್ ಗೆ ಇಂಥವರು ಮಾತ್ರ ಅರ್ಜಿ ಸಲ್ಲಿಸಬೇಕು : ಯಾರು ಅರ್ಹರು ನೋಡಿ

Only such people should apply for new ration card

ನಮಸ್ಕಾರ ಸ್ನೇಹಿತರೆ ಇದೀಗ ಕರ್ನಾಟಕದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ ಎಂದು ಹೇಳಬಹುದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಇದಕ್ಕೆ ಮುಖ್ಯ ಕಾರಣವಾಗಿದೆ. ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಡ್ರೈವಿಂಗ್ ಲೈಸೆನ್ಸ್ ವೋಟರ್ ಐಡಿ ಮೊದಲಾದ ಗುರುತಿನ ಚೀಟಿಗಳು ನಮಗೆ ಪ್ರತಿಯೊಂದು ಕೆಲಸಕ್ಕೂ ಎಷ್ಟು ಅಗತ್ಯವಿದೆಯೋ ಅದೇ ರೀತಿ ರೇಷನ್ ಕಾರ್ಡ್ ಎನ್ನುವುದು ಕೂಡ ಪ್ರಮುಖ ದಾಖಲೆಯಾಗಿದೆ ಎಂದು ಹೇಳಬಹುದು.

Only such people should apply for new ration card
Only such people should apply for new ration card

ಅದರಲ್ಲಿಯೂ ಮುಖ್ಯವಾಗಿ ಕರ್ನಾಟಕದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಗೆ ಹೆಚ್ಚಿನ ಮಹತ್ವ ಬಂದಿದೆ. ಹೌದು ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ನಮ್ಮ ಬಳಿ ರೇಷನ್ ಕಾರ್ಡ್ ಕಡ್ಡಾಯವಾಗಿ ಇರಬೇಕು ಅದರಲ್ಲಿಯೂ ಬಿಪಿಎಲ್ ರೇಷನ್ ಕಾರ್ಡ್ ಇರುವವರಿಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಯು ಸಾಕಷ್ಟು ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಬಹುದು.

ಸರ್ಕಾರದಿಂದ ಪಡಿತರ ಚೀಟಿ ವಿಲೇವಾರಿ ಬಗ್ಗೆ ಸ್ಪಷ್ಟನೆ :

ಈಗಾಗಲೇ ರಾಜ್ಯ ಸರ್ಕಾರ ತಿಳಿಸಿರುವಂತೆ ಈ ಹಿಂದೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಆಗಿರುವಂತಹ ಎಲ್ಲಾ ಅರ್ಜಿಗಳನ್ನು ಪರಿಶೀಲನೆ ಮಾಡಿ ಅವುಗಳ ವಿತರಣೆ ಕಾರ್ಯವನ್ನು ಏಪ್ರಿಲ್ ತಿಂಗಳಿನಿಂದ ಪ್ರಾರಂಭಿಸಲಾಗುತ್ತದೆ ಎನ್ನುವ ಮಾಹಿತಿ ತಿಳಿದಿದೆ ಅದೇ ರೀತಿ ಹೊಸ ಪಡಿತರ ಚೀಟಿ ವಿತರಣೆ ಕಾರ್ಯ ಏಪ್ರಿಲ್ ಒಂದರಿಂದ ಆರಂಭವಾಗಿದೆ. ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಯೋಚಿಸುತ್ತಿದ್ದರೆ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯಲ್ಲಿ ಅಥವಾ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು :

ರಾಜ್ಯ ಸರ್ಕಾರ ಇದೀಗ ಏಪ್ರಿಲ್ ಒಂದರಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಿದೆ ಅದರಂತೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕೆಂದಿರುವವರು ಈ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ.

  1. ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕು.
  2. ಬಡತನ ರೇಖೆಗಿಂತ ಕೆಳಗಿರುವವರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು.
  3. ಒಂದು ಲಕ್ಷಕ್ಕಿಂತ ಕುಟುಂಬದ ವಾರ್ಷಿಕ ಆದಾಯವು ಕಡಿಮೆ ಇದ್ದಾಗ ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಪಡೆಯಬಹುದು.
  4. ಕುಟುಂಬದ ಆದಾಯದ ಆಧಾರದ ಮೇಲೆ ಅರ್ಜಿಯನ್ನು ಪರಿಶೀಲಿಸಿ, ಬಿಪಿಎಲ್ ಮತ್ತು ಎಪಿಎಂ ರೇಷನ್ ಕಾರ್ಡ್ ಗಳನ್ನು ವಿಂಗಡಣೆ ಮಾಡಿ ಪಡಿತರ ಚೀಟಿ ವಿತರಣೆ ಮಾಡಲಾಗುತ್ತದೆ.
  5. ಹೊಸದಾಗಿ ಮದುವೆಯಾಗಿರುವಂತಹ ದಂಪತಿಗಳು ಪ್ರತ್ಯೇಕ ಮನೆಯಲ್ಲಿ ವಾಸಿಸುತ್ತಿದ್ದರೆ ಅವರು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.
  6. ಈಗಾಗಲೇ ರೇಷನ್ ಕಾರ್ಡ್ ಹೊಂದಿರುವವರು ಮತ್ತೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.
  7. ಪಡಿತರ ಚೀಟಿಗೆ ಸಂಬಂಧಪಟ್ಟಂತೆ ಮಾನದಂಡಗಳನ್ನು ಮೀರಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತಿಲ್ಲ.
  8. ಸರ್ಕಾರಿ ನೌಕರಿಯಲ್ಲಿರುವವರು ಅಥವಾ ತೆರಿಗೆ ಪಾವತಿ ಮಾಡುವವರು ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವಂತಿಲ್ಲ.
    ಹೀಗೆ ಕೆಲವೊಂದು ಅರ್ಹತೆಗಳನ್ನು ಹೊಂದುವುದರ ಮೂಲಕ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ದಾಖಲೆಗಳು :

ಕರ್ನಾಟಕ ಸರ್ಕಾರವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಅದರಂತೆ ಈ ದಾಖಲೆಗಳನ್ನು ಪ್ರಮುಖವಾಗಿ ಅಭ್ಯರ್ಥಿಗಳು ಹೊಂದಿರಬೇಕು.

  1. ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್.
  2. ಬಯೋಮೆಟ್ರಿಕ್ ದಾಖಲೆ.
  3. ಆದಾಯ ಪ್ರಮಾಣ ಪತ್ರ.
  4. ವಿಳಾಸದ ಪುರಾವೆ.
  5. ಜಾತಿ ಪ್ರಮಾಣ ಪತ್ರ.
    ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಅಭ್ಯರ್ಥಿಗಳು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಅಥವಾ ನ್ಯಾಯಬೆಲೆ ಅಂಗಡಿಗಳಲ್ಲಿ ಅತ್ಯಂತ ಸೇವ ಕೇಂದ್ರಗಳಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಒಟ್ಟಾರೆ ರಾಜ್ಯ ಸರ್ಕಾರವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಈ ಬಗ್ಗೆ ಎಲ್ಲಾ ಜನತೆಗೂ ಶೇರ್ ಮಾಡುವ ಮೂಲಕ ಅವರೇನಾದರೂ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಬಯಸುತ್ತಿದ್ದರೆ.

ಕರ್ನಾಟಕ ಸರ್ಕಾರವು ಏಪ್ರಿಲ್ ಒಂದರಿಂದ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಿದೆ ಎಂದು ತಿಳಿಸಿ ಇದರಿಂದ ಅವರು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *