ನಮಸ್ಕಾರ ಸ್ನೇಹಿತರೆ ಆರೋಗ್ಯದ ವಿಷಯದಲ್ಲೂ ಮಹಿಳೆಯರು ಹೆಚ್ಚಿನ ಕಾಳಜಿಯನ್ನು ವಹಿಸುತ್ತಿದ್ದು ಇದೀಗ ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ಪ್ರಧಾನಮಂತ್ರಿ ಮಾತೃತ್ವ ವಂದನೆ ಯೋಜನೆಯನ್ನು ಜಾರಿಗೆ ತಂದಿದೆ. ಮಹಿಳೆಯರ ಸಬಲೀಕರಣಕ್ಕೆ ಸಾಕಷ್ಟು ಪ್ರಯತ್ನವನ್ನು ಕೇಂದ್ರ ಸರ್ಕಾರ ಪಡುತ್ತಿದೆ ಎಂದು ಹೇಳಬಹುದು ಅದಷ್ಟೇ ಅಲ್ಲದೆ ಮಹಿಳೆಯರ ಆರೋಗ್ಯದ ವಿಷಯದಲ್ಲಿಯೂ ಕೂಡ ಹೆಚ್ಚಿನ ಕಾಳಜಿಯನ್ನು ವಹಿಸುತ್ತಿದೆ.
ತಾಯಿ ಮತ್ತು ಮಗುವಿನ ಪೋಷಣೆಗೆ ಈ ಯೋಜನೆಯ ಅಡಿಯಲ್ಲಿ ಸರ್ಕಾರ ಹಣವನ್ನು ಒದಗಿಸುತ್ತದೆ ಇದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಲೇಖನದಲ್ಲಿ ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ.
Contents
ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆ :
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಯನ್ನು ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಜಾರಿಗೆ ತರಲಾಗಿದೆ. ಬೇರೆ ಬೇರೆ ಕಂತುಗಳಲ್ಲಿ ಗರ್ಭಿಣಿಯಾದಾಗ ಮತ್ತು ಜನ್ಮ ನೀಡಿದ ನಂತರ ಮಹಿಳೆಯರಿಗೆ ಒಟ್ಟು 11000 ಆರ್ಥಿಕ ನೆರವನ್ನು ಈ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ.
ಈ ಯೋಜನೆಯ ಪ್ರಯೋಜನವನ್ನು ಹಾಲುಣಿಸುವ ಮಹಿಳೆಯರು ಮತ್ತು ಗರ್ಭಿಣಿಯರು ಪಡೆದುಕೊಳ್ಳಬಹುದಾಗಿದೆ. 2017ರ ಬಜೆಟ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಮಾತೃತ್ವ ವಂದನ ಯೋಜನೆಯನ್ನು ಘೋಷಣೆ ಮಾಡಿದರು.
11,000ಗಳ ಆರ್ಥಿಕ ನೆರವನ್ನು ಬೇರೆ ಬೇರೆ ಮೂರು ಕಂತುಗಳಲ್ಲಿ ನೀಡುವುದಲ್ಲದೆ ಇದರ ಜೊತೆಗೆ ಮಹಿಳೆಯರ ಬ್ಯಾಂಕ್ ಖಾತೆಗೆ ಈ ಹಣವನ್ನು ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. ಹಣಕಾಸಿನ ನೆರವಿನ ಜೊತೆಗೆ ಗರ್ಭಿಣಿ ಸ್ತ್ರೀಯರಿಗೆ ಉಚಿತ ಔಷಧಿ ಗರ್ಭಧಾರಣೆಯ ಪೂರ್ವ ಮತ್ತು ನಂತರದ ವೈದ್ಯಕೀಯ ತಪಾಸಣೆ ಸೌಲಭ್ಯವನ್ನು ಕೂಡ ಮಾತೃತ್ವ ವಂದನ ಯೋಜನೆಯ ಅಡಿಯಲ್ಲಿ ಉಚಿತವಾಗಿ ಕೇಂದ್ರ ಸರ್ಕಾರ ಈ ಯೋಜನೆಯ ಅಡಿಯಲ್ಲಿ ನೀಡುತ್ತದೆ.
ಮೂರು ಹಂತಗಳಲ್ಲಿ ಹಣ ವರ್ಗಾವಣೆ :
ಪ್ರಧಾನ ಮಂತ್ರಿ ಮಾತೃತ್ವ ವಂದನ ಯೋಜನೆಯ ಅಡಿಯಲ್ಲಿ ಎರಡು ಕಂತುಗಳಲ್ಲಿ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೆರವಾಗಿ ವರ್ಗಾವಣೆ ಮಾಡಲಾಗುತ್ತದೆ 5000ಗಳನ್ನು ಮಹಿಳೆ ಮೊದಲ ಬಾರಿ ತಾಯಿಯಾದರೆ ಹಾಗೂ ಎರಡನೇ ಬಾರಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದರೆ 6,000ಗಳ ಹಣವನ್ನು ಈ ಯೋಜನೆಯಡಿಯಲ್ಲಿ ನೀಡಲಾಗುತ್ತದೆ ನೀಡಲಾಗುತ್ತದೆ.
ಮೊದಲನೆಯದಾಗಿ 3000ಗಳನ್ನು ಹಾಗೂ ಜನನ ನೊಂದಣಿಗಾಗಿ ಮೊದಲ ಲಸಿಕೆಯನ್ನು ಮಗುವಿಗೆ ಕೊಟ್ಟ ನಂತರ 2000ಗಳನ್ನು ನೀಡಲಾಗುತ್ತದೆ ಆದರೆ ಎರಡನೇ ಬಾರಿ ಹೆಣ್ಣು ಮಗುವಿಗೆ ಜನ್ಮ ನೀಡಿದರೆ 6,000 ಹಣವನ್ನು ಜನನದ ನಂತರ ಒಂದೇ ಬಾರಿಗೆ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.
ಯಾರೆಲ್ಲ ಈ ಯೋಜನೆಗೆ ಅರ್ಹರು :
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಮಾತ್ರ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ಕೆಲವೊಂದು ಅರ್ಹತೆಗಳನ್ನು ಹೊಂದಬೇಕಾಗುತ್ತದೆ ಈ ಅರ್ಹತೆಗಳನ್ನು ಹೊಂದಿರುವ ಮಹಿಳೆಯರು ಮಾತ್ರ ಈ ಯೋಜನೆಯ ಮೂಲಕ ಆರ್ಥಿಕ ನೆರವನ್ನು ಕೇಂದ್ರ ಸರ್ಕಾರದಿಂದ ಪಡೆಯಬಹುದು.
- ಭಾರತೀಯ ಪ್ರಜೆಯಾಗಿರಬೇಕು.
- 19 ವರ್ಷ ಮೇಲ್ಪಟ್ಟ ಮಹಿಳಾ ಅಭ್ಯರ್ಥಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು.
- ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರು ಮಾತ್ರ ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ.
- ಈ ಯೋಜನೆಯ ಅಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿ ಸಹಾಯಕಿಯರು ಆಶಾ ಕಾರ್ಯಕರ್ತೆಯರು ಕೂಡ ಪ್ರಯೋಜನವನ್ನು ಪಡೆದುಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ.
ಇದನ್ನು ಓದಿ : PM ಕಿಸಾನ್ 17ನೇ ಕಂತಿನ ಹಣ ನಾಳೆ 11:00 ಗಂಟೆಗೆ ಖಾತೆಗೆ ಜಮಾ!
ಅರ್ಜಿ ಸಲ್ಲಿಸುವ ವಿಧಾನ :
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಕೇಂದ್ರ ಸರ್ಕಾರವು ಆನ್ಲೈನ್ ಮೂಲಕ ಹಾಗೂ ಆಫ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ.
ತಮ್ಮ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಅಥವಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡುವುದರ ಮೂಲಕ ಗರ್ಭಿಣಿಯಾಗಿರುವುದರ ಬಗ್ಗೆ ಮೆಡಿಕಲ್ ಸರ್ಟಿಫಿಕೇಟ್ ಅನ್ನು ಒದಗಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಯ ಅಡಿಯಲ್ಲಿ ಹಣವನ್ನು ಖಾತೆಗೆ ಬರುವಂತೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅದೇ ರೀತಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾದರೆ ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. https:/pmmmvy.wcd.gov.in/Account/Login ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :
ಪ್ರಧಾನಮಂತ್ರಿ ಮಾತೃತ್ವ ವಂದನಾ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.
- ಆಧಾರ್ ಕಾರ್ಡ್
- ಜನ್ಮ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಪಾನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಪಾಸ್ಪೋರ್ಟ್ ಸೈಜ್ ಫೋಟೋ.
ಹೀಗೆ ಈ ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಪ್ರಧಾನ ಮಂತ್ರಿ ಮಾತೃತ್ವವನ್ನು ಯೋಜನೆಗೆ ಅರ್ಜಿ ಸಲ್ಲಿಸಿ, 11,000ಗಳ ಹಣವನ್ನು ಪಡೆದುಕೊಳ್ಳಬಹುದು.
ಒಟ್ಟಾರೆ ಕೇಂದ್ರ ಸರ್ಕಾರವು ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ ಅದರಂತೆ ಈ ಯೋಜನೆಯ ಮೂಲಕ 11,000 ಆರ್ಥಿಕ ನೆರವನ್ನು ಕೇಂದ್ರ ಸರ್ಕಾರ ಮಹಿಳೆಯರು ಮತ್ತು ಮಕ್ಕಳ ಆರೋಗ್ಯಕ್ಕಾಗಿ ನೀಡುತ್ತಿದ್ದು.
ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಗರ್ಭಿಣಿ ಸ್ತ್ರೀಯರು ಹಾಗೂ ಹಾರಣಿಸುವ ಮಹಿಳೆಯರು ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ನಿಮಗೆ ತಿಳಿದಿರುವಂತಹ ಸ್ತ್ರೀಯರಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಮಾಡಿ ಇದರಿಂದ ಅವರು ಕೂಡ ಕೇಂದ್ರ ಸರ್ಕಾರದಿಂದ 11,000ಗಳ ಆರ್ಥಿಕ ನೆರವನ್ನು ಪಡೆದುಕೊಳ್ಳಲಿ.