rtgh

Rain Alert : ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ, ಕೆಲವೇ ಗಂಟೆಗಳಲ್ಲಿ ಭಾರಿ ಮಳೆ ..!

Rain in more than 20 districts of Karnataka

ನಮಸ್ಕಾರ ಸ್ನೇಹಿತರೆ ಕುಡಿಯುವ ನೀರಿನ ಬಿಕ್ಕಟಿನಿಂದ ಹಾಗೂ ಬರದಿಂದ ತತ್ತರಿಸುತ್ತಿದ್ದ ರಾಜ್ಯದ ಕೆಲವೊಂದು ಕಡೆ ಲಘು ಮಳೆಯಾಗಿದ್ದು ರಾಜ್ಯದ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ದಕ್ಷಿಣ ಭಾರತದಲ್ಲಿ ಹವಾಮಾನ ಇಲಾಖೆಯು ಕೂಡ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

Rain in more than 20 districts of Karnataka
Rain in more than 20 districts of Karnataka

ರಾಜ್ಯದ 23ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಾರ್ಚ್ 25ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ ಹಾಗಾದರೆ ರಾಜ್ಯದಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ ಯಾವಾಗ ಮಳೆ ಆಗಲಿದೆ ಎಷ್ಟು ಡಿಗ್ರಿ ಸೆಲ್ಸಿಯಸ್ ಅಷ್ಟು ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು.

ಇಪತ್ತು ಅಧಿಕ ಜಿಲ್ಲೆಗಳಲ್ಲಿ ಮಳೆ ಆರ್ಭಟ :

ರಾಜ್ಯದ 23ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ಮಾರ್ಚ್ 25ರವರೆಗೆ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ನೀಡಿದೆ.

ಅದರಂತೆ ಮಂಡ್ಯ ಚಾಮರಾಜನಗರ ಕೊಡಗು ಹಾಸನ ಚಿಕ್ಕಮಗಳೂರು ಬೆಂಗಳೂರು ಗ್ರಾಮಾಂತರ ಚಿತ್ರದುರ್ಗ ಚಿಕ್ಕಬಳ್ಳಾಪುರ ಕೊಡಗು ಸೇರಿದಂತೆ ರಾಜ್ಯದ 23 ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 25ರವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ರಾಜ್ಯದ ಜನತೆಗೆ ನೀಡಿದೆ.

ಮಾರ್ಚ್ 24 ರಂದು ಮಳೆ :

ಹಾಸನ ಬೆಂಗಳೂರು ಗ್ರಾಮಾಂತರ ಕೋಲಾರ ಬೆಂಗಳೂರು ನಗರ ರಾಮನಗರ ಮಂಡ್ಯ ಮೈಸೂರು ಚಿಕ್ಕಬಳ್ಳಾಪುರ ಚಾಮರಾಜನಗರ ದಾವಣಗೆರೆ ತುಮಕೂರು, ಬಳ್ಳಾರಿ, ವಿಜಯಪುರ ಶಿವಮೊಗ್ಗ ಕೊಡಗು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳು ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಇದರ ಜೊತೆಗೆ ಕರ್ನಾಟಕದ ಕರಾವಳಿಯ ಎರಡು ಜಿಲ್ಲೆ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ದಕ್ಷಿಣ ಒಳನಾಡಿನ 15 ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಮೂರು ದಿನಗಳ ಕಾಲ ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಮಳೆ ಬೀಳಲಿದೆ.

ಮಾರ್ಚ್ 23ರಂದು ಬೆಂಗಳೂರಿನ ನಗರದ ವಿವಿಧ ಸ್ಥಳಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ರಾಜ್ಯದ ಜನತೆಗೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ : ಸರ್ಕಾರದಿಂದ ಕೃಷಿ ಭೂಮಿ ಹೊಂದಿರುವ ರೈತರಿಗೆ 25,000 ಹಣ : ಈ ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯದಲ್ಲಿ ಹವಾಮಾನ ವರದಿ :

ಮಾರ್ಚ್ 24 ರಂದು ರಾಜ್ಯದ ತಾಪಮಾನ ವರದಿಯ ಪ್ರಕಾರ ಬೆಂಗಳೂರು ನಗರ ಜಿಲ್ಲೆಯಲ್ಲಿ ಗರಿಷ್ಠ 34.0 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ ಮಾರ್ಚ್ 20 ರಂದು 34.5 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಅತ್ಯಂತ ಗರಿಷ್ಠ ಉಷ್ಣಾಂಶ ಕೊಪ್ಪಳದಲ್ಲಿ 39.5°c ಅಷ್ಟು ದಾಖಲಾಗಿದ್ದು 18.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ಚಾಮರಾಜನಗರದಲ್ಲಿ ದಾಖಲಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ರಾಜ್ಯದ ಜನತೆಗೆ ತಿಳಿಸಿದೆ.

ಒಟ್ಟಾರೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆಯ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಹಾಗೂ ಬೆಂಗಳೂರು ಹವಾಮಾನ ಕೇಂದ್ರವೂ ಕೂಡ ವರದಿ ನೀಡಿದ್ದು ಇನ್ನೇನು ಮಳೆ ಮಾರ್ಚ್ ತಿಂಗಳಲ್ಲಿ ಆರಂಭವಾಗಲಿದೆ ಎಂಬುದರ ಮಾಹಿತಿಯನ್ನು ನೋಡಬಹುದಾಗಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯ ಬಗ್ಗೆ ಮಾಹಿತಿ ನೀಡುವುದರ ಬಗ್ಗೆ ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *