ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಪಡಿತರ ಕಾರ್ಡ್ ಹೊಂದಿರುವ ಎಲ್ಲಾ ಫಲಾನುಭವಿಗಳಿಗೆ ಈ ಯೋಜನೆ ಬಹುಮುಖ್ಯವಾಗಿದೆ ಎಂದು ಹೇಳಬಹುದು.
ಎಲ್ಲರೂ ಕೂಡ ಈ ಯೋಜನೆಯ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಇದರಲ್ಲಿ ಯಾವುದೇ ರೀತಿಯ ತೊಡಕುಗಳು ಇರುವುದಿಲ್ಲ.
Contents
ಕೇಂದ್ರದ ಅಟಲ್ ಪಿಂಚಣಿ ಯೋಜನೆ :
ಕೇಂದ್ರ ಸರ್ಕಾರದ 2015ರ ಬಜೆಟ್ ಮಂಡನೆಯಲ್ಲಿ ಅಟಲ್ ಪಿಂಚಣಿ ಯೋಜನೆಯನ್ನು ಘೋಷಣೆ ಮಾಡಲಾಗಿತ್ತು. ಯುವಕರಿಗೆ ಮತ್ತು ಮಹಿಳೆಯರಿಗೆ ವೃದ್ಯಾಪ್ಯದ ಆರ್ಥಿಕ ಸಬಲತೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡುವ ಸಲುವಾಗಿ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ.
ದೇಶದಲ್ಲಿ ಇರುವಂತಹ ಎಲ್ಲಾ ಪ್ರಾಥಮಿಕ ಅಸಂಘಟಿತ ವಲಯಗಳನ್ನು ಗುರಿಯಾಗಿಸಿಕೊಂಡು ಈ ಯೋಜನೆಯನ್ನು ಪ್ರಾರಂಭ ಮಾಡಲಾಗಿದ್ದು ಪಿಂಚಣಿ ನಿಧಿ ನಿಯಂತ್ರಣ ಹಾಗೂ ಅಭಿವೃದ್ಧಿ ಕಾರ್ಯದಲ್ಲಿ ಈ ಯೋಜನೆ ಬರುತ್ತದೆ ಅಲ್ಲದೆ ಈ ಯೋಜನೆಯು ಎಲ್ಲಾ ವರ್ಗದ ಜನರಿಗೆ ಅನ್ವಯಿಸುತ್ತದೆ.
ಇದನ್ನು ಓದಿ : ನಿಮ್ಮ ನಗರದಲ್ಲೇ ಪಡೆಯಿರಿ ಸರ್ಕಾರಿ ಉದ್ಯೋಗ.! ಪಿಯುಸಿ ಪಾಸಾಗಿದ್ರೆ ಸಾಕು ಸಿಗುತ್ತೇ ₹42,000 ವೇತನದ ಹುದ್ದೆ
ಅಟಲ್ ಪಿಂಚಣಿ ಯೋಜನೆಯಲ್ಲಿ ಹೂಡಿಕೆ :
ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಟ 40 ವರ್ಷ ಆಗಿರಬೇಕೆಂದು ತಿಳಿಸಲಾಗಿದೆ. ಪ್ರಧಾನಮಂತ್ರಿ ಅಟಲ್ ಪಿಂಚಣಿ ಯೋಜನೆಯ ಅಡಿಯಲ್ಲಿ ಅರ್ಜಿದಾರರು ಜನ ಧನ ಯೋಜನೆಯ ಅಡಿಯಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿರಬೇಕಾಗುತ್ತದೆ ಇಲ್ಲದಿದ್ದರೆ ಪೋಸ್ಟ್ ಆಫೀಸ್ ನಲ್ಲಿ ಒಂದು ಖಾತೆಯನ್ನು ಹೊಂದಿರಬೇಕು.
ಈ ಯೋಜನೆಯ ಮೂಲಕ ಕನಿಷ್ಠ ಒಂದು ಸಾವಿರದಿಂದ 5 ವರೆಗೆ ಪ್ರತಿ ತಿಂಗಳು ಪಿಂಚಣಿಯನ್ನು ಪಡೆಯಬಹುದಾಗಿತ್ತು ಬ್ಯಾಂಕ್ ಖಾತೆಗೆ ಮಾಸಿಕವಾಗಿ ಹಣವನ್ನು ಹೂಡಿಕೆ ಮಾಡಬೇಕು. ಪ್ರತಿ ತಿಂಗಳ 5,000ಗಳ ಹಣವನ್ನು 60 ವರ್ಷ ತುಂಬಿದ ನಂತರ ಪಡೆಯಬೇಕಾದರೆ ಪ್ರಧಾನಮಂತ್ರಿ ಜನಧನ ಯೋಜನೆಯ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಪ್ರಧಾನ ಮಂತ್ರಿ ಜನಧನ್ ಯೋಜನೆಗೆ ಖಾತೆಯನ್ನು ತೆರೆಯಬೇಕಾದರೆ ಅರ್ಜಿದಾರರು ಬ್ಯಾಂಕಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿದ ನಂತರ ಖಾತೆಯನ್ನು ತೆರೆಯಬಹುದು ಅಥವಾ ಭಾರತೀಯ ಅಂಚೆ ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸಿ ಖಾತೆಯನ್ನು ತೆರೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು :
ಕೇಂದ್ರ ಸರ್ಕಾರದಲ್ಲಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು ಅವುಗಳೆಂದರೆ,
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಬಾಸ್ ಬುಕ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ವಯಸ್ಸಿನ ಪ್ರಮಾಣ ಪತ್ರ
ಒಟ್ಟಾರೆ ಕೇಂದ್ರ ಸರ್ಕಾರವು ಅನೇಕ ರೀತಿಯ ಯೋಜನೆಗಳನ್ನು ಜಾರಿಗೆ ತಂದಿದ್ದು ಆ ಯೋಜನೆಗಳ ಮೂಲಕ ಪ್ರತಿ ತಿಂಗಳು ಹೂಡಿಕೆ ಮಾಡಿ ವೃದ್ಯಾಪ್ಯದಲ್ಲಿ 5000 ರೂಪಾಯಿಗಳ ಪಿಂಚಣಿಯನ್ನು ಸುಲಭವಾಗಿ ಪಡೆಯಬಹುದಾಗಿದೆ. ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.