rtgh

ಬೆಳ್ಳಂಬೆಳಗ್ಗೆ ರೇಷನ್ ಕಾರ್ಡ್ ಅಪ್ಡೇಟ್ ಕಡ್ಡಾಯ : ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ ಪಡೆಯಲು ಜಾರಿ

ration-card-update-mandatory-karnataka-govt

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಪಡಿತರ ಚೀಟಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಒಂದು ಹೊಸ ನಿಯಮವನ್ನು ಜಾರಿಗೊಳಿಸಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಪಡಿತರ ಚೀಟಿ ಅದರಲ್ಲಿಯೂ ಬಿಪಿಎಲ್ ಕಾರ್ಡ್ಗಳನ್ನು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವವರಿಗೆ ವಿತರಣೆ ಮಾಡಲಾಗುತ್ತಿದೆ.

ration-card-update-mandatory-karnataka-govt
ration-card-update-mandatory-karnataka-govt

ದೇಶದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಹಸಿವಿನಿಂದ ಸಾಯಬಾರದು ಎನ್ನುವ ಉದ್ದೇಶವನ್ನಿಟ್ಟುಕೊಂಡು ಈ ಯೋಜನೆಯನ್ನು ಜಾರಿಗೆ ತಂದಿದ್ದು ಅಂತಹ ಕುಟುಂಬಗಳಿಗೆ ಉಚಿತ ಪಡಿತರವನ್ನು ಸರ್ಕಾರದಿಂದ ನೀಡಲಾಗುತ್ತದೆ. ಅತಿ ಕಡಿಮೆ ಮೊತ್ತವನ್ನು ಇಷ್ಟು ದಿನಗಳ ಕಾಲ ಪಡಿತರ ಪಡೆದುಕೊಳ್ಳುವುದಕ್ಕೆ ಪಾವತಿ ಮಾಡಬೇಕಾಗಿತ್ತು, ಆದರೆ ಕೊರೋನಾ ಸಮಯದಿಂದ ಉಚಿತವಾಗಿ ಅಕ್ಕಿಯನ್ನು ಕೇಂದ್ರ ಸರ್ಕಾರ ವಿತರಣೆ ಮಾಡಿಕೊಂಡು ಬಂದಿದೆ ಅದನ್ನು ಇದೀಗ 2025 ರಲ್ಲಿಯೂ ಮುಂದುವರಿಸುವುದಾಗಿ ಸರ್ಕಾರ ತಿಳಿಸಿದೆ.

ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೊಳಿಸಿರುವುದರ ಬಗ್ಗೆ ಮಾಹಿತಿಯನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

ಈ ಕೆಲಸ ರೇಷನ್ ಕಾರ್ಡ್ ಇಲ್ಲದೇ ಇದ್ದರೆ ಆಗುವುದಿಲ್ಲ :

ಈಗ ಕೇವಲ ಪಡಿತರ ವಸ್ತುಗಳನ್ನು ಖರೀದಿ ಮಾಡುವುದಕ್ಕಾಗಿ ಮಾತ್ರ ಪಡಿತರ ಚೀಟಿಯನ್ನು ಬಳಸುವುದಲ್ಲದೆ ಇತರ ದಾಖಲೆಗಳಾಗಿಯೂ ಕೂಡ ಇದೀಗ ಪಡಿತರ ಚೀಟಿ ಬಳಸಲಾಗುತ್ತಿದೆ. ಸರ್ಕಾರ ಡ್ರೈವಿಂಗ್ ಲೈಸೆನ್ಸ್ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಮೊದಲಾದವುಗಳಿಗೆ ವಿಳಾಸ ದಾಖಲೆಯಾಗಿ ನೀಡಲಾಗಿದ್ದು ರೇಷನ್ ಕಾರ್ಡ್ ಗಳನ್ನು ಕೂಡ ಇದೀಗ ವಿಳಾಸ ದಾಖಲೆಯಾಗಿ ಬಳಕೆ ಮಾಡಬಹುದಾಗಿದೆ.

ಅಲ್ಲದೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಡಿ ಬಿ ಟಿ ಹಣ ಪಡೆದುಕೊಳ್ಳುವುದಕ್ಕೂ ಕೂಡ ಹಾಗೂ ಆಯುಷ್ಮಾನ್ ಕಾರ್ಡ್ ಪಡೆದುಕೊಳ್ಳುವುದಕ್ಕೂ ಕೂಡ ರೇಷನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ ಎಂದು ಹೇಳಬಹುದು.

ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ರೇಷನ್ ಕಾರ್ಡ್ ಅತ್ಯಂತ ಪ್ರಮುಖ ದಾಖಲೆಯಾಗಿದೆ ಎಂದು ಇವತ್ತಿನ ದಿನಮಾನಗಳಲ್ಲಿ ನೋಡಬಹುದಾಗಿದೆ ಅಲ್ಲದೆ ಎಲ್ಲಾ ಯೋಜನೆಗಳ ಪ್ರಯೋಜನವನ್ನು ರೇಷನ್ ಕಾರ್ಡ್ ಇಲ್ಲದೇ ಇದ್ದರೆ ಪಡೆಯಲು ಸಾಧ್ಯವಾಗುವುದಿಲ್ಲ.

ಇದನ್ನು ಓದಿ : ಬೆಳ್ಳಂಬೆಳಗ್ಗೆ ಗೂಗಲ್ ಕ್ರೋಮ್ ಬಳಸುವ ಎಲ್ಲರಿಗೂ ಹೊಸ ಆದೇಶ.! ಎಚ್ಚರಿಕೆ ಸಂದೇಶ .!

ರೇಷನ್ ಕಾರ್ಡ್ ಅಪ್ಡೇಟ್ ಬಗ್ಗೆ ಮಾಹಿತಿ :

ಸರ್ಕಾರವು ಜಾರಿಗೆ ತಂದಿರುವ ಕೆಲವು ಯೋಜನೆಗಳ ಪ್ರಯೋಜನಗಳು ಸಿಗಬೇಕೆಂದರೆ ಪಡಿತರ ಚೀಟಿ ಇರುವುದಲ್ಲದೆ ಪಡಿತರ ಚೀಟಿ ಅಪ್ಡೇಟ್ ಆಗಿರುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ ಹಾಗಾಗಿ ನಿಮ್ಮ ರೇಷನ್ ಕಾರ್ಡ್ ಅನ್ನು ಆನ್ಲೈನ್ ಮೂಲಕ ಅಪ್ಡೇಟ್ ಮಾಡಿಸಿಕೊಳ್ಳಬೇಕು.

ನೀವೇನಾದರೂ ನಿಮ್ಮ ರೇಷನ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಿಕೊಂಡರೆ 30 ರಿಂದ 45 ದಿನಗಳ ಒಳಗಾಗಿ ಅಪ್ ಡೇಟ್ ಮಾಡಿದಂತಹ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದಾಗಿದೆ. ರೇಷನ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಳ್ಳಲು ಅಭ್ಯರ್ಥಿಗಳು ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ತಮ್ಮ ರೇಷನ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಿಕೊಳ್ಳಬಹುದು.

ರೇಷನ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಂಡ ನಂತರ ಸರ್ಕಾರವು ಜಾರಿಗೊಳಿಸುವ ಹಾಗೂ ಹೀಗಿರುವ ರೇಷನ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಂಡ ನಂತರ ಸರ್ಕಾರವು ಜಾರಿಗೊಳಿಸುವ ಹಾಗೂ ಈಗಿರುವಂತಹ ಯೋಜನೆಗಳ ಪ್ರಯೋಜನಗಳನ್ನು ಸುಲಭವಾಗಿ ಪಡೆದುಕೊಳ್ಳಬಹುದಾಗಿದೆ.

ಅಪ್ಡೇಟ್ ಮಾಡುವ ಲಿಂಕ್ : https://ahara.kar.nic.in/Home/EServices

ಆಧಾರ್ ಕಾರ್ಡ್ ನೊಂದಿಗೆ ರೇಷನ್ ಕಾರ್ಡ್ ಲಿಂಕ್ ಮಾಡಬೇಕು :

ರೇಷನ್ ಕಾರ್ಡ್ ನಿಂದ ಉಚಿತವಾಗಿ ರೇಷನ್ ಪಡೆದುಕೊಳ್ಳಬೇಕಾದರೆ ಇನ್ನು ಮುಂದೆ ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ರೇಷನ್ ಕಾರ್ಡ್ ಲಿಂಕ್ ಆಗಿರಲೇಬೇಕು ಎಂದು ಸರ್ಕಾರ ತಿಳಿಸಿದೆ. ಇದರ ಜೊತೆಗೆ ನಿಮ್ಮ ಆಧಾರ್ ಕಾರ್ಡ್ ಕೂಡ ಅಪ್ಡೇಟ್ ಆಗಿರುವುದು ಅಷ್ಟೇ ಮುಖ್ಯವಾಗಿದ್ದು ಆಧಾರ್ ಕಾರ್ಡ್ ವಿವರಗಳನ್ನು ಒಳಗೊಂಡಿರುವ ಅಪ್ಡೇಟ್ ಫಾರ್ಮುಂದು ಅಭ್ಯರ್ಥಿಗಳು ನಿಮ್ಮ ಸ್ಥಳೀಯ ಆಹಾರ ಇಲಾಖೆಗೆ ಭೇಟಿ ನೀಡಿ ಅದರಲ್ಲಿ ಆಧಾರ್ ಕಾರ್ಡ್ ವಿವರಗಳನ್ನು ಪರಿಶೀಲಿಸಿದ ನಂತರ ಫಿಂಗರ್ ಪ್ರಿಂಟ್ ಅನ್ನು ನೀವು ನೀಡಬೇಕಾಗುತ್ತದೆ.

ಈ ರೀತಿ ಮಾಡುವುದರಿಂದ ನಿಮ್ಮ ಆಧಾರ್ ಕಾರ್ಡ್ ಕೂಡ ಅಪ್ಡೇಟ್ ಆಗುತ್ತದೆ ಅದರ ಜೊತೆಗೆ ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯಲ್ಲಿ ಅಥವಾ ಸೇವ ಕೇಂದ್ರಗಳಲ್ಲಿ ಭೇಟಿ ನೀಡಿ ನಿಮ್ಮ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಅನ್ನು ಸುಲಭವಾಗಿ ಲಿಂಕ್ ಮಾಡಿಸಿಕೊಳ್ಳಬಹುದು.

ಆಧಾರ್ ಕಾರ್ಡ್ ನೊಂದಿಗೆ ರೇಷನ್ ಕಾರ್ಡನ್ನು ಲಿಂಕ್ ಮಾಡಬೇಕಾದರೆ ರಾಜ್ಯ ಸರ್ಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಲಿಂಕ್ ಮಾಡಿಸಬಹುದು ಹಾಗೂ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಆಫ್ಲೈನ್ ಮೂಲಕವು ಕೂಡ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಿಸಬಹುದಾಗಿದೆ.

ಹೀಗೆ ಕರ್ನಾಟಕ ಸರ್ಕಾರವು ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಅಪ್ಡೇಟ್ ಬಗ್ಗೆ ಹೊಸ ನಿಯಮವನ್ನು ಜಾರಿಗೆ ತಂದಿದ್ದು ರೇಷನ್ ಕಾರ್ಡ್ ಅಪ್ಡೇಟ್ ಆದಾಗ ಮಾತ್ರ ಸರ್ಕಾರ ಜಾರಿಗೊಳಿಸುವ ಎಲ್ಲ ಯೋಜನೆಗಳ ಪ್ರಯೋಜನಗಳನ್ನು ಸುಲಭವಾಗಿ ಪಡೆದುಕೊಳ್ಳಬಹುದಾಗಿದೆ.

ಹಾಗಾಗಿ ತಕ್ಷಣವೇ ತಮ್ಮ ರೇಷನ್ ಕಾರ್ಡನ್ನು ಅಪ್ಡೇಟ್ ಮಾಡಿಸುವುದರ ಜೊತೆಗೆ ಆಧಾರ್ ಕಾರ್ಡ್ ನೊಂದಿಗೆ ರೇಷನ್ ಕಾರ್ಡ್ ಅನ್ನು ಲಿಂಕ್ ಮಾಡಿಸುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರಿಗೂ ನಿಮ್ಮ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರಿಗೂ ಕೂಡ ತಮ್ಮ ರೇಷನ್ ಕಾರ್ಡ್ ಅಪ್ಡೇಟ್ ಮಾಡಿಸುವುದರ ಜೊತೆಗೆ ಆಧಾರ್ ಕಾರ್ಡ್ ನೊಂದಿಗೆ ರೇಷನ್ ಕಾರ್ಡ್ ಅನ್ನು ಕೂಡ ಲಿಂಕ್ ಮಾಡಿಸಲು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *