rtgh

BMTC ಕಂಡಕ್ಟರ್ ಹುದ್ದೆಗಳಿಗೆ ನೇಮಕಾತಿ : ಈ ಕೂಡಲೇ ಅರ್ಜಿ ಸಲ್ಲಿಸಿ ಪರೀಕ್ಷಾ ಪ್ರಾಧಿಕಾರದಿಂದ ಮಾಹಿತಿ

Recruitment for BMTC Conductor Posts

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಎಂಟಿಸಿಯಲ್ಲಿ ಖಾಲಿ ಇರುವಂತಹ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹಾರ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. 200500 ನಿರ್ವಾಹಕ ಹುದ್ದೆಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ ಏಪ್ರಿಲ್ 19 ರಿಂದ ಮೇ 18ರವರೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವಕಾಶ ನೀಡಿದೆ.

ಅದರಂತೆ ಎಷ್ಟು ಹುದ್ದೆಗಳು ಖಾಲಿ ಇವೆ ಹೇಗೆ ಅರ್ಜಿ ಸಲ್ಲಿಸಬೇಕು ವಿದ್ಯಾರ್ಹತೆ ಅರ್ಜಿ ಶುಲ್ಕದ ವಿವರಣೆ ಸೇರಿದಂತಹ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

Recruitment for BMTC Conductor Posts
Recruitment for BMTC Conductor Posts

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳು :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಒಟ್ಟು 2500 ನಿರ್ವಾಹಕ ಹುದ್ದೆಗಳು ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿಯನ್ನು ಆಹ್ವಾನಿಸಿದೆ. ಅದರಂತೆ ಹುದ್ದೆಗೆ ಸಂಬಂಧಿಸಿದಂತೆ ಹುದ್ದೆಗಳ ವಿವರವನ್ನು ನೋಡುವುದಾದರೆ,

  1. ಉದ್ಯೋಗ ಸಂಸ್ಥೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
  2. ಹುದ್ದೆಗಳ ಹೆಸರು : ಬಸ್ ನಿರ್ವಾಹಕ
  3. ನೇಮಕಾತಿ ಇಲಾಖೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
  4. ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ ಮುಖಾಂತರ
  5. ಉದ್ಯೋಗದ ಸ್ಥಳ : ಬೆಂಗಳೂರು
  6. ಒಟ್ಟು ಖಾಲಿ ಇರುವ ಹುದ್ದೆಗಳು : 2500
    ಹೀಗೆ ಒಟ್ಟು 2500 ಹುದ್ದೆಗಳು ಬಿಎಂಟಿಸಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ, ಉದ್ಯೋಗವನ್ನು ಪಡೆಯಬಹುದಾಗಿದೆ.

ಇದನ್ನು ಓದಿ : ರೈತರಿಗೆ ಸಂತಸದ ಸುದ್ದಿ.!! ನಿಮ್ಮೊಂದಿಗೆ ಕೈ ಜೋಡಿಸಲಿದೆ ಸರ್ಕಾರ

ವಿದ್ಯಾರ್ಹತೆ :

ಬಿಎಂಟಿಸಿಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಕೆಲವೊಂದು ವಿದ್ಯಾರ್ಹತೆಗಳನ್ನು ಹೊಂದಿರಬೇಕು ಅವುಗಳೆಂದರೆ,

  1. ಕಂಡಕ್ಟರ್ ಹುದ್ದೆಗಳಿಗೆ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  2. ಸಿಬಿಎಸ್ ಅಥವಾ ಐಸಿಎಸ್ ಓದಿದ್ದರು ಅರ್ಜಿಯನ್ನು ಸಲ್ಲಿಸಲು ಕಂಡಕ್ಟರ್ ಹುದ್ದೆಗಳಿಗೆ ಅವಕಾಶ ಕಲ್ಪಿಸಲಾಗಿದೆ.
  3. ಮೂರು ವರ್ಷಗಳ ಡಿಪ್ಲೋಮಾದಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.
  4. ಮಾನ್ಯತೆ ಹೊಂದಿರುವ ಮೋಟರು ವಾಹನ ನಿರ್ವಾಹಕ ಪರಮಾಣು ಗೆ ಹಾಗೂ ಬ್ಯಾಡ್ಜ್ ಗಳನ್ನು ಕೂಡ ಅಭ್ಯರ್ಥಿಗಳ ಪಡೆದಿರಬೇಕು.
  5. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
    ಹೀಗೆ ಈ ಮೇಲಿನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಮಾತ್ರ ಬಿಎಂಟಿಸಿಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮಾಸಿಕ ವೇತನ :

ಬಿಎಂಟಿಸಿಯಲ್ಲಿ ಖಾಲಿ ಇರುವ ಬಸ್ ಕಂಡಕ್ಟರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 18660ಗಳಿಂದ 25300 ಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ ಹಾಗೂ ವಿವಿಧ ಸವಲತ್ತುಗಳು ಕೂಡ ಅನ್ವಯವಾಗುತ್ತವೆ.

ವಯಸ್ಸಿನ ಮಿತಿ :

ಬಿಎಂಟಿಸಿಯಲ್ಲಿ ಖಾಲಿ ಇರುವ ಬಸ್ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ವರ್ಗಗಳಿಗೆ ಅನುಸಾರವಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ.

  1. 35 ವರ್ಷ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ.
  2. 38 ವರ್ಷ 2a 2b 3a 3b ಅಭ್ಯರ್ಥಿಗಳಿಗೆ
  3. 40ವರ್ಷ ಎಸ್ ಸಿ ಎಸ್ ಟಿ ಪ್ರವರ್ಗ 1 ಅಭ್ಯರ್ಥಿಗಳಿಗೆ
  4. 45 ವರ್ಷ ಮಾಜಿ ಸೈನಿಕ ಅಭ್ಯರ್ಥಿಗಳಿಗೆ
    ಹೀಗೆ ವರ್ಗಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿಯಲ್ಲಿ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕದ ವಿವರ :

ಬಿ ಎಂ ಟಿ ಸಿ ಅಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಅದರಂತೆ ಅರ್ಜಿ ಶುಲ್ಕವನ್ನು ವರ್ಗಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದೆ.

  1. 750 ಸಾಮಾನ್ಯ ವರ್ಗ ಮತ್ತು 2a 2b 3a 3b ಅಭ್ಯರ್ಥಿಗಳಿಗೆ
  2. 500 ಎಸ್ಸಿ ಎಸ್ಟಿ ಪ್ರವರ್ಗ 1 ಮಾಜಿ ಸೈನಿಕರು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ.

ಪ್ರಮುಖ ದಿನಾಂಕಗಳು :

ಬಿ ಎಂ ಟಿ ಸಿ ಅಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಪ್ರಮುಖ ದಿನಾಂಕಗಳನ್ನು ತಿಳಿದಿರಬೇಕಾಗುತ್ತದೆ.

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :19-04-2024
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :18-05-2024
    ಹೀಗೆ ಈ ಕೊನೆಯ ದಿನಾಂಕದೊಳಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಒಟ್ಟಾರೆ ಕರ್ನಾಟಕ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ವಾಹನ ಮಾಡುತ್ತಿದ್ದು ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಎಂಟಿಸಿಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಮಾಡಿದೆ ಅದರಂತೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೇಲಿನ ಅರ್ಹತೆಗಳನ್ನು ಪೂರ್ಣಗೊಳಿಸಿದ್ದಾರೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಬೆಂಗಳೂರಿನಲ್ಲಿ ಪಡೆದುಕೊಳ್ಳಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ನಿಮಗೆ ತಿಳಿದಿರುವ ನಿರುದ್ಯೋಗ ಯುವಕರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *