ನಮಸ್ಕಾರ ಸ್ನೇಹಿತರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಪ್ರತಿ ತಿಂಗಳು 1200 ಗಳನ್ನು ಪಡೆಯಬಹುದಾಗಿದೆ. ಎಲ್ಲ ವರ್ಗದ ಸಾರ್ವಜನಿಕರಿಗೂ ಕೂಡ ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಒಂದಲ್ಲ ಒಂದು ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಹೇಳಬಹುದು.
ಪ್ರತಿ ತಿಂಗಳು ಮಾಶಾಸನವನ್ನು ಕೂಡ ವರ್ಗದ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ರಾಜ್ಯ ಸರ್ಕಾರ ನೀಡುತ್ತದೆ. ಈ ಒಂದು ಮಾಸಾಶನದಿಂದ ಹಿರಿಯ ನಾಗರಿಕರಿಗೆ ಸಾಕಷ್ಟು ಪ್ರಯೋಜನ ಸಿಗಲಿದೆ ಎಂದು ಹೇಳಬಹುದು ಅಲ್ಲದೆ ಈ ಯೋಜನೆಯ ಪ್ರಯೋಜನವನ್ನು ಸಾಕಷ್ಟು ಹಿರಿಯ ನಾಗರಿಕರು ಪಡೆದುಕೊಳ್ಳುತ್ತಿದ್ದಾರೆ.
Contents
ಸಂಧ್ಯಾ ಸುರಕ್ಷಾ ಯೋಜನೆ :
2007ರಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯನ್ನು 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ಜಾರಿಗೆ ತರಲಾಯಿತು. ಪ್ರತಿ ಬಜೆಟ್ ನಲ್ಲಿ ಅಂದಿನಿಂದ ಇಂಥವರಿಗೆ ಒಂದಷ್ಟು ಹಣವನ್ನು ಸಂಧ್ಯಾ ಸುರಕ್ಷಾ ಯೋಜನೆಗೆ ಸರ್ಕಾರ ಮೀಸಲಿಡುತ್ತದೆ. 1200ಗಳನ್ನು ರೂಪಾಯಿಗಳನ್ನು ಸರ್ಕಾರದ ಈ ಯೋಜನೆಯ ಅಡಿಯಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಈ ಯೋಜನೆಯ ಪ್ರಯೋಜನವನ್ನು ಯಾರು ಪಡೆಯಬಹುದು ಎಂದು ನೋಡುವುದಾದರೆ.
ಇದನ್ನು ಓದಿ : SSLC Result : ದಿಡೀರ್ ಪ್ರಕಟ ಎಲ್ಲಾ ವಿದ್ಯಾರ್ಥಿಗಳು ಶಾಕ್.! ತಕ್ಷಣ ರಿಸಲ್ಟ್ ನೋಡಿ ! ಇಲ್ಲಿದೆ ಡೈರೆಕ್ಟ್ ಲಿಂಕ್
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು :
ರಾಜ್ಯ ಸರ್ಕಾರದ ಸಂಧ್ಯಾ ಸುರಕ್ಷಾ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಈ ಕೆಳಗೆ ತಿಳಿಸಿಲ್ಲ ಆಗಿರುವಂತಹ ಜನರು ಅರ್ಜಿ ಸಲ್ಲಿಸಬಹುದಾಗಿದೆ.
- ಸಣ್ಣ ರೈತರು.
- ಅತಿ ಸಣ್ಣ ರೈತರು.
- ಮೀನುಗಾರರು.
- ಅಸಂಘಟಿತ ವಲಯದಲ್ಲಿ ಕೆಲಸ ಮಾಡುವಂತಹ ಕಾರ್ಮಿಕರು.
- ಕೃಷಿಕರು.
- ಕುಟುಂಬದ ವಾರ್ಷಿಕ ಆದಾಯವು ಅಂದರೆ ಗಂಡ ಹೆಂಡತಿ ಇಬ್ಬರ ವಾರ್ಷಿಕ ಆದಾಯವು ಸಂಯೋಜಿತವಾಗಿ 32,000 ಕ್ಕಿಂತ ಕಡಿಮೆ ಇರಬೇಕು.
- ಹತ್ತು ಸಾವಿರಕ್ಕಿಂತ ಹೆಚ್ಚಿನ ಎಫ್ ಡಿ ಯನ್ನು ಗಂಡ ಹೆಂಡತಿ ಸಂಯೋಜಿತ ಬ್ಯಾಂಕ್ ಖಾತೆಯಲ್ಲಿ ಪಡೆದಿರಬಾರದು.
- ಯಾವುದೇ ರೂಪದಲ್ಲಿ ಈಗಾಗಲೇ ಪಿಂಚಣಿಯನ್ನು ಪಡೆದುಕೊಳ್ಳುತ್ತಿದ್ದಾರೆ ಅಂಥವರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
- ಗಂಡು ಮಕ್ಕಳು ಕುಟುಂಬದಲ್ಲಿ ಇದ್ದರೆ ಪೋಷಕರನ್ನು ಅವರು ನೋಡಿಕೊಳ್ಳುತ್ತಿದ್ದರು ಕೂಡ ಹಿರಿಯ ನಾಗರಿಕರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಹೀಗೆ ಕೆಲವೊಂದು ಅರ್ಹತೆಗಳನ್ನು ಹೊಂದುವುದರ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :
ಸಂಧ್ಯಾ ಸುರಕ್ಷಾ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದುವುದರ ಮೂಲಕ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಪ್ರಯೋಜನವನ್ನು ಪಡೆಯಬಹುದು.
- ವಯಸ್ಸಿನ ಪ್ರಮಾಣ ಪತ್ರ.
- ಆದಾಯ ಪ್ರಮಾಣ ಪತ್ರ.
- ರೇಷನ್ ಕಾರ್ಡ್.
- ಬ್ಯಾಂಕ್ ಪಾಸ್ ಬುಕ್.
- ಆಧಾರ್ ಕಾರ್ಡ್.
- ಡ್ರೈವಿಂಗ್ ಲೈಸೆನ್ಸ್.
ಈ ದಾಖಲೆಗಳನ್ನು ಹೊಂದಿ ಆನ್ಲೈನ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಿ ತಿಂಗಳಿಗೆ 1200ಗಳನ್ನು ಮಾಶಾಸನ ವಾಗಿ ಪಡೆಯಬಹುದು.
ಅರ್ಜಿ ಸಲ್ಲಿಸುವ ವಿಧಾನ :
ರಾಜ್ಯ ಸರ್ಕಾರದ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಹಚ್ಚಿದಾರರು ಯಾವುದೇ ಗ್ರಾಮವನ್ ಬಾಪೂಜಿ ಕೇಂದ್ರ ತಹಶೀಲ್ದಾರ್ ಕಚೇರಿ ಗಳಿಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಿದ ನಂತರ ಡಿಬಿಟಿ ಮೂಲಕ ರಾಜ್ಯ ಸರ್ಕಾರ ಯೋಜನೆಯ ಹಣವನ್ನು ವರ್ಗಾವಣೆ ಮಾಡುತ್ತದೆ.
ಒಟ್ಟಾರೆ ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗಾಗಿ ಸoಧ್ಯಾ ಸುರಕ್ಷಾ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಪಡೆದುಕೊಳ್ಳಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲಾ ಹಿರಿಯ ನಾಗರಿಕರಿಗೆ ಶೇರ್ ಮಾಡಿದ ಧನ್ಯವಾದಗಳು.