ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. 25ವರೆಗಿನ ಸ್ಕಾಲರ್ಶಿಪ್ ಅನ್ನು ಟಾಟಾ ಕಂಪನಿಯಿಂದ ಹೇಗೆ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಹಾಗಾದರೆ ವಿದ್ಯಾರ್ಥಿಗಳು ಟಾಟಾ ಕಂಪನಿ ನೀಡುತ್ತಿರುವ ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಯಾವೆಲ್ಲ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಯಬಹುದಾಗಿದೆ.
Contents
ಟಾಟಾ ಕಂಪನಿಯಿಂದ 25000 ವಿದ್ಯಾರ್ಥಿ ವೇತನ :
ಟಾಟಾ ಕಂಪನಿಯು 25 ವಿದ್ಯಾರ್ಥಿ ವೇತನವನ್ನು ಪ್ರತಿಭಾವಂತ ಮತ್ತು ಹಿಂದುಳಿದ ವರ್ಗಗಳಿಗೆ ನೀಡುತ್ತಿದೆ. ಈ ಸ್ಕಾಲರ್ಶಿಪ್ ಅನ್ನು ಟಾಟಾ ಎ ಐ ಎ ಜೀವವಿಮ ಕಂಪನಿಯು ನೀಡುತ್ತಿದ್ದು ತಮ್ಮ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಮುಂದುವರೆಸಿಕೊಂಡು ಹೋಗಲು ಅತ್ಯುತ್ತಮ ವಿದ್ಯಾಭ್ಯಾಸಕ್ಕಾಗಿ ಮತ್ತು ಇತರ ಶೈಕ್ಷಣಿಕ ಖರ್ಚುಗಳಿಗಾಗಿ ೨೫ ಸಾವಿರದವರೆಗಿನ ವಿದ್ಯಾರ್ಥಿ ವೇತನವನ್ನು ಟಾಟಾ ಕಂಪನಿಯ ವತಿಯಿಂದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.
ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸು ಬ್ಯಾಂಕಿಂಗ್ ಅರ್ಥಶಾಸ್ತ್ರ ವಾಣಿಜ್ಯ ಜೀವವಿಮೆ ಇತರ ವೃತ್ತಿಪರ ಕ್ಷೇತ್ರಗಳಲ್ಲಿ ಪದವಿ ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮೋ ಓದುತ್ತಿರುವಂತಹ ವಿದ್ಯಾರ್ಥಿಗಳು ಟಾಟಾ ಕಂಪನಿಯು ನೀಡುತ್ತಿರುವ 25 ಸಾವಿರ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.
ಇದನ್ನು ಓದಿ : ಯುಗಾದಿಯ ಇತಿಹಾಸ ನಿಮಗೆ ತಿಳಿದಿದೆಯಾ ? ಹಬ್ಬದ ಆಸಕ್ತಿದಾಯಕ ವಿಚಾರ ಇಲ್ಲಿದೆ
ಸ್ಕಾಲರ್ಶಿಪ್ ಗೆ ಇರುವ ಅರ್ಹತೆಗಳು :
ಟಾಟಾ ಕಂಪನಿ ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕು.
- ಟಾಟಾ ಕಂಪನಿಯು ನೀಡುತ್ತಿರುವ ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಜೀವವಿಮೆ ಇತರ ವೃತ್ತಿಪರ ಕ್ಷೇತ್ರಗಳಲ್ಲಿ ಪದವಿ ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮೋ ಅರ್ಥಶಾಸ್ತ್ರ ವಾಣಿಜ್ಯಶಾಸ್ತ್ರ ಓದುತ್ತಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
- 1 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಮತ್ತು ಪದವಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಟಾಟಾ ಕಂಪನಿಯು ನೀಡುತ್ತಿರುವ ಈ ವಿದ್ಯಾರ್ಥಿ ವೇತನವನ್ನು ಸುಮಾರು 60 ಸಾವಿರದವರೆಗೆ ಒಂದೇ ಬಾರಿಗೆ ಪಡೆಯಲು ಅರ್ಹರಾಗಿರುತ್ತಾರೆ.
- 25000 ಸ್ಕಾಲರ್ಶಿಪ್ ಅನ್ನು ಮೊದಲನೇ ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಓದುತ್ತಿರುವ ಮತ್ತು ಪಾಸಾದ ವಿದ್ಯಾರ್ಥಿಗಳು ಪಡೆಯಬಹುದಾಗಿದೆ.
- ಈ ಸ್ಕಾಲರ್ಶಿಪ್ ಯೋಜನೆಗೆ ಮೊದಲ ವರ್ಷ ಪದವಿ ಪೂರ್ವ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅಂದರೆ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳು ಕೂಡ ಟಾಟಾ ಕಂಪನಿಯ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
- ವಿದ್ಯಾರ್ಥಿಗಳು ತಮ್ಮ ಹಿಂದಿನ ತರಗತಿಯಲ್ಲಿ ಕನಿಷ್ಠ 50% ಅಂಕಗಳನ್ನು ಸ್ಕಾಲರ್ಶಿಪ್ ಆಗಿ ಅರ್ಜಿ ಸಲ್ಲಿಸಲು ಹೊಂದಿರಬೇಕು.
- ಅರ್ಜಿದಾರರ ಕುಟುಂಬದ ಆದಾಯವು ಎಲ್ಲ ಮೂಲ ಗಳಿಂದ 5 ಲಕ್ಷ ಗಳಿಗಿಂತ ಹೆಚ್ಚಿರಬಾರದು.
- ಹೆಚ್ಚಿನ ಆದ್ಯತೆಯನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ವಿತರಚೇತನ ಮಕ್ಕಳಿಗೆ ನೀಡಲಾಗುತ್ತದೆ.
- ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೂ ಕೂಡ ಈ ವಿದ್ಯಾರ್ಥಿ ವೇತನವನ್ನು ನೀಡಲು ಟಾಟಾ ಕಂಪನಿಯು ನಿರ್ಧರಿಸಿದೆ.
ವಿದ್ಯಾರ್ಥಿ ವೇತನಕ್ಕೆ ಅಗತ್ಯವಿರುವ ದಾಖಲೆಗಳು :
ವಿದ್ಯಾರ್ಥಿಗಳು ಟಾಟಾ ಸ್ಕಾಲರ್ ಶಿಪ್ ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.
- ಅರ್ಜಿದಾರರ ಪಾಸ್ಪೋರ್ಟ್ ಸೈಜ್ ಫೋಟೋ
- ಆಧಾರ್ ಕಾರ್ಡ್
- ಹಿಂದಿನ ತರಗತಿಯ ಮಾರ್ಕ್ಸ್ ಕಾರ್ಡ್
- ಕಾಲೇಜು ನೀಡುವ ಪ್ರವೇಶ ಪತ್ರ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
ಹೀಗೆ ಎಲ್ಲ ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ನಿಗದಿತ ದಿನಾಂಕ ದೊಳಗಾಗಿ ವಿದ್ಯಾರ್ಥಿಗಳು ಟಾಟಾ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ :
ಟಾಟಾ ಸ್ಕಾಲರ್ ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳು 15 ಡಿಸೆಂಬರ್ 2023ರ ಒಳಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. https://www.buddy4study.com/page/paras-scholarship-programme ಟಾಟಾ ಸ್ಕಾಲರ್ಶಿಪ್ ಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ 25000 ಗಳ ವಿದ್ಯಾರ್ಥಿ ವೇತನವನ್ನು ಪಡೆಯಬಹುದು.
ಒಟ್ಟಾರೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸರ್ಕಾರ ಮಾತ್ರವಲ್ಲದೆ ಇತರ ಖಾಸಗಿ ಕಂಪನಿಗಳು ಕೂಡ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದು ಅದಕ್ಕೆ ಉದಾಹರಣೆ ಎಂಬಂತೆ ಟಾಟಾ ಕಂಪನಿಯು ನೀಡುತ್ತಿರುವ 25000ಗಳವರೆಗಿನ ಟಾಟಾ ಸ್ಕಾಲರ್ಶಿಪ್ ಹೆಚ್ಚು ಮಹತ್ವ ಪಡೆದಿದೆ ಎಂದು ಹೇಳಬಹುದು.
ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರಿಗೆ ಟಾಟಾ ಕಂಪನಿಯು ನೀಡುತ್ತಿರುವ ಟಾಟಾ ಸ್ಕಾಲರ್ಷಿಪ್ನ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ತಿಳಿಸಿ ಧನ್ಯವಾದಗಳು.