ಹಲೋ ಸ್ನೇಹಿತರೇ, ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಏಪ್ರಿಲ್ 10 ರಂದು ಪ್ರಕಟಗೊಂಡಿದ್ದು, ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶಕ್ಕೆ ವಿದ್ಯಾರ್ಥಿಗಳು ಎದುರು ನೋಡುತ್ತಿದ್ದಾರೆ.
ಹೌದು, 2023-24 ನೇ ಸಾಲಿನ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಹಾಗೂ ಇವರ ಪೋಷಕರು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಒಟ್ಟು ಮೂರು ಪರೀಕ್ಷೆಗಳನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ನಡೆಸಲಾಗಿದೆ. ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಒಂದು ಪ್ರಾರಂಭವಾಗಿದ್ದು, ಏಪ್ರಿಲ್ ಆರರಂದು ಅಂತ್ಯವಾಗಿದೆ.
ಏಪ್ರಿಲ್ 15ರಿಂದ ಮೌಲ್ಯಮಾಪನದ ಕಾರ್ಯವು ಆರಂಭವಾಗಲಿದ್ದು, ಸುಮಾರು 20 ದಿನಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಆದಷ್ಟು ಬೇಗನೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಲಿದ್ದು, ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ಮಂಜುಳಾ ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ ನೋಡಲು ನೇರ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಪೂರಕ ಪರೀಕ್ಷೆಯಲ್ಲದ ಮೂರು ಪರೀಕ್ಷೆಗಳನ್ನು ಈ ಬಾರಿ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ನಡೆಸುವ ಹಿನ್ನೆಲೆಯಲ್ಲಿ ಬಹುವೇಗ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಬೇಕಾದಂತಹ ಅನಿವಾರ್ಯತೆ ಉಂಟಾಗಿದ್ದು, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಯ ಉತ್ತರ ಪತ್ರಿಕೆಯ ಮೌಲ್ಯಮಾಪನ ಪ್ರಕ್ರಿಯೆಯನ್ನು ಮಂಡಳಿಯು ಏಪ್ರಿಲ್ 15ರಿಂದಲೇ ನಡೆಸಲು ಕ್ರಮ ಕೈಗೊಂಡಿದೆ.
ಏಪ್ರಿಲ್ 15 ರಂದು ಕರ್ನಾಟಕದಲ್ಲಿ ರಾಜ್ಯದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಾರಂಭಗೊಳ್ಳಲಿದೆ. ಅಲ್ಲದೇ ಎಲ್ಲ ಮೂಲಸೌಕರ್ಯಗಳನ್ನು ಮೌಲ್ಯಮಾಪಕರಿಗೆ ಕಲ್ಪಿಸಬೇಕು ಮತ್ತು ಮೌಲ್ಯಮಾಪಕರು ಹಾಜರಾಗುವಂತೆ ಸರಿಯಾದ ಕ್ರಮವನ್ನು ಕೈಗೊಳ್ಳಬೇಕು ಹಾಗೂ ಕಡ್ಡಾಯವಾಗಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಮೊದಲೇ ತಿಳಿದು ಬಂದಿದೆ.
ಎಸ್ಎಸ್ಎಲ್ ಸಿ ಪರೀಕ್ಷೆ ಒಂದರಲ್ಲಿ ರಿಸಲ್ಟ್ ನೋಡುವುದೇಗೆ?
ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ತಿಳಿದುಕೊಳ್ಳ ಬೇಕಾದರೆ https://kseab.karnataka.gov.in ಅಥವಾ https://karresults.nic.in ವೆಬ್ ಸೈಟ್ ಗೆ ಭೇಟಿ ನೀಡಿ ತಮ್ಮ ರಿಜಿಸ್ಟರ್ ಅನ್ನು ನಮೂದಿಸುವುದರ ಮೂಲಕ ಫಲಿತಾಂಶವನ್ನು ತಿಳಿದುಕೊಳ್ಳಬಹುದಾಗಿದೆ.