ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಅಧಿಕೃತ ಅಧಿಸೂಚನೆಯನ್ನು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿಗಾಗಿ ಪ್ರಕಟಿಸಲಾಗಿದೆ.
ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿರುವವರು 10ನೇ ತರಗತಿ ಪಾಸ್ ಆಗಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹಾಗಾದರೆ ವಿಧಾನ ಪರಿಷತ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಹಾಗೂ ಅರ್ಹತೆಗಳು ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.
Contents
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳು :
ಕರ್ನಾಟಕ ವಿಧಾನ ಪರಿಷತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇದೀಗ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅದರಂತೆ ಯಾವ ಹುದ್ದೆಗಳು ಕರ್ನಾಟಕ ವಿಧಾನ ಪರಿಷತ್ ನಲ್ಲಿ ಖಾಲಿ ಇದೆ ಹಾಗೂ ಎಷ್ಟು ಹುದ್ದೆಗಳು ಖಾಲಿ ಇದೆ ಎಂದು ನೋಡುವುದಾದರೆ,
- ಖಾಲಿ ಇರುವ ಹುದ್ದೆಗಳ ಸಂಖ್ಯೆ : 32 ಖಾಲಿ ಹುದ್ದೆಗಳು
- ಹುದ್ದೆಯ ಹೆಸರು : ಚಾಲಕರು ಮತ್ತು ಗ್ರೂಪ್ ಡಿ ಹುದ್ದೆಗಳು ಖಾಲಿ ಇವೆ
- ಅರ್ಜಿ ಸಲ್ಲಿಸುವ ವಿಧಾನ : ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು
- ಉದ್ಯೋಗದ ಸ್ಥಳ : ಬೆಂಗಳೂರಿನಲ್ಲಿ.
- ಗ್ರೂಪ್ ಡಿ ಹುದ್ದೆಗಳು : 29 ಹುದ್ದೆಗಳು
- ಹುದ್ದೆಯ ಹೆಸರು : ವಾಹನ ಚಾಲಕರು 3
ಒಟ್ಟಾರೆ ಬೆಂಗಳೂರಿನಲ್ಲಿ ವಾಹನ ಚಾಲಕರು ಮತ್ತು ಗ್ರೂಪ್ ಡಿ ಹುದ್ದೆಗಳು ಸೇರಿ ಒಟ್ಟು 32 ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ವಿಧಾನ ಪರಿಷತ್ ಸಚಿವಾಲಯ ಅರ್ಜಿಯನ್ನು ಆಹ್ವಾನಿಸಿದೆ.
ಇದನ್ನು ಓದಿ : ಗೃಹಲಕ್ಷ್ಮಿ ಮಹಿಳೆಯರಿಗೆ 6000 ಜಮಾ.! ಈ ದಾಖಲೆ ಕಡ್ಡಾಯವಾಗಿ ಸಲ್ಲಿಸಬೇಕು ನೋಡಿ !
ವಿದ್ಯಾರ್ಹತೆ :
ಕರ್ನಾಟಕ ವಿಧಾನ ಪರಿಷತ್ ಸಚಿವಾಲಯ ಬೆಂಗಳೂರಿನಲ್ಲಿ ಖಾಲಿ ಇರುವ ಗ್ರೂಪ್ ಡಿ ಹಾಗೂ ಚಾಲಕರು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಶೈಕ್ಷಣಿಕ ಮಂಡಳಿಯಿಂದ 10ನೇ ತರಗತಿಯನ್ನು ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.
- ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಂದಿಗೆ ಮೋಟಾರು ಕಾರು ಅಥವಾ ಭಾರವಾಹನಗಳ ಚಾಲನೆಯ ಪರವಾನಗಿಯನ್ನು ಚಾಲಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೊಂದಿರುವುದು ಕಡ್ಡಾಯವಾಗಿದೆ.
ವಯಸ್ಸಿನ ಮಿತಿ :
ಕರ್ನಾಟಕ ವಿಧಾನ ಪರಿಷತ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳ ಆಗಿರಬೇಕು ಹಾಗೂ ಗರಿಷ್ಠ ವಯೋಮಿತಿ ವರ್ಗಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದೆ ಎಂದು ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.
- 35 ವರ್ಷ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ
- 38 ವರ್ಷ : 2a 2b 3a 3b ಪ್ರವರ್ಗ ಅಭ್ಯರ್ಥಿಗಳಿಗೆ
- 40ವರ್ಷ : ಪ್ರವರ್ಗ ಒಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ.
ವೇತನ ಶ್ರೇಣಿ :
ಕರ್ನಾಟಕ ವಿಧಾನ ಪರಿಷತ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಬಳವನ್ನು ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.
- 21,400 ರಿಂದ 42,000 : ವಾಹನ ಚಾಲಕರು ಹುದ್ದೆಗಳಿಗೆ
- 18000 ಡಿಂದ 28,950 : ಗ್ರೂಪ್ ಡಿ ಹುದ್ದೆಗಳಿಗೆ
ಹೀಗೆ ಕರ್ನಾಟಕ ವಿಧಾನ ಪರಿಷತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ಸಂಬಳವನ್ನು ರಾಜ್ಯ ಸರ್ಕಾರ ನಿಗದಿಪಡಿಸಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಕರ್ನಾಟಕ ವಿಧಾನ ಪರಿಷತ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸರ್ಕಾರಿ ಮುದ್ರಣಾಲಯದಿಂದ ಪಡೆದುಕೊಂಡು ಸಂಬಂಧಿಸಿದ ಸ್ವಯಂ ದೃಢೀಕರಣ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮುಖಾಂತರ ಅಥವಾ ಖುದ್ದಾಗಿ ಕಳುಹಿಸಬಹುದಾಗಿದೆ.
- ಅಂಚೆ ಮುಖಾಂತರ ಕಳುಹಿಸುವ ವಿಳಾಸ : ಕಾರ್ಯದರ್ಶಿ,ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ, ಅಂಚೆ ಪಟ್ಟಿಗೆ ಸಂಖ್ಯೆ : 5 0 7 9 , ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು 560001
- ಖುದ್ದಾಗಿ ಅರ್ಜಿ ಸಲ್ಲಿಸಲು ವಿಳಾಸ : ವಿಧಾನಸೌಧದ ಎರಡನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆಯಾದ 216
ಈ ವಿಳಾಸಕ್ಕೆ ಪತ್ರ ಸ್ವೀಕಾರ ಮತ್ತು ರವಾನಿ ಶಾಖೆಗೆ ತಲುಪಿಸಬಹುದಾಗಿದೆ.
ಅರ್ಜಿ ಶುಲ್ಕ :
ಕರ್ನಾಟಕ ವಿಧಾನ ಪರಿಷತ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಆಫ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದರು ಕೂಡ ವರ್ಗಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- 600 ರೂಪಾಯಿ -ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ
- 300 ರೂಪಾಯಿ -ಪ್ರವರ್ಗ 2 ಎ ಟು ಬಿ ತ್ರೀ ಎ ತ್ರೀ ಬಿ ಅಭ್ಯರ್ಥಿಗಳಿಗೆ
- ಯಾವುದೇ ಅರ್ಜಿ ಶುಲ್ಕವಿಲ್ಲ : ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಹಾಗೂ ಪ್ರವರ್ಗ ಒಂದು
- ರೂ. 50 – ಮಾಜಿ ಸೈನಿಕ ಅಭ್ಯರ್ಥಿಗಳಿಗೆ
ಪ್ರಮುಖ ದಿನಾಂಕಗಳು :
ಕರ್ನಾಟಕ ವಿಧಾನ ಪರಿಷತ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳನ್ನು ನೋಡುವುದಾದರೆ,
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :04-03-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :05-04-2024
ಹೀಗೆ ನಿಗದಿತ ದಿನಾಂಕದೊಳಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಅರ್ಹ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ :
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ ಆದ https://www.kla.kar.nic.in ಈ ವೆಬ್ ಸೈಟ್ ಗೆ ಭೇಟಿ ನೀಡಬಹುದು ಅಥವಾ ಸಹಾಯವಾಣಿ ಸಂಖ್ಯೆಯಾದ 080-22258569 ಈ ಸಂಖ್ಯೆಗೆ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಒಟ್ಟಾರೆ ಕರ್ನಾಟಕ ಸರ್ಕಾರವು ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡುತ್ತಿದೆ ಹಾಗೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಹತ್ತನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು 10ನೇ ತರಗತಿ ಪಾಸಾದ ಎಲ್ಲಾ ಅಭ್ಯರ್ಥಿಗಳಿಗೆ ಶೇರ್ ಮಾಡುವ ಮೂಲಕ ಅವರೇನಾದರೂ ಬೆಂಗಳೂರಿನಲ್ಲಿ ಕೆಲಸ ಮಾಡಲು ಬಯಸುತ್ತಿದ್ದರೆ ಇದೊಂದು ಸುವರ್ಣ ಅವಕಾಶವೆಂದು ತಿಳಿಸಿ ಧನ್ಯವಾದಗಳು.